ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ರಾಜಕೀಯ ನಿವೃತ್ತಿ
ದಾವಣಗೆರೆ: ಮಾಜಿ ಉಪ ಮುಖ್ಯಮಂತ್ರಿ, ಶಾಸಕ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ತಾವು ಸ್ವಇಚ್ಛೆಯಿಂದ ನಿವೃತ್ತಿಯಾಗುತ್ತಿದ್ದು, ಈಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಅವರಿಗೆ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.
ರಾಜಕೀಯದಲ್ಲಿ ಇಲ್ಲಿಯವರೆಗೆ ಗೌರವ ಸ್ಥಾನಮಾನ ನೀಡಿದ ಹಿರಿಯರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.