ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿಯಿಂದ ಸ್ಪರ್ಧಿಸಲು ಮನವಿ ಸಲ್ಲಿಸಿದ ಮಾಜಿ ಮೇಯರ್ ಉಮಾ ಪ್ರಕಾಶ್

ದಾವಣಗೆರೆ: 2023 ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವ ಬಗ್ಗೆ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ಮಾಜಿ ಮೇಯರ್ ಉಮಾ ಪ್ರಕಾಶ್ ಮನವಿ ಮಾಡಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ 2023 ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಗೆ ನಾನು ಸ್ಪರ್ಧಾ ಕಾಂಕ್ಷಿಯಾಗಿರುತ್ತೇನೆ. ದಾವಣಗೆರೆ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಸಂಘಟನೆಯಲ್ಲಿ ಸುಮಾರು ಎರಡು ದಶಕಗಳಿಂದ ಕಾರ್ಯಕರ್ತಳಾಗಿ ನಿರ್ವಹಿಸಿರುತ್ತೇನೆ.
2007ರಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿ ಒಂದು ವರ್ಷ ದಾವಣಗೆರೆ ಮಹಾನಗರಕ್ಕೆ ಮಹಾಪೌರಳಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿರುತ್ತೇನೆ. ಪ್ರಸ್ತುತ 2019 ರಲ್ಲಿ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡನೇ ಬಾರಿ ಮಹಾನಗರ ಪಾಲಿಕೆ ಸದಸ್ಯಳಾಗಿ ಯೋಜನೆ ಮತ್ತು ಕಾಮಗಾರಿ ಸ್ಥಾಯಿಸಮಿತಿಯ ಅಧ್ಯಕ್ಷಳಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುತ್ತೇನೆ.
ನಾನು ಹಿಂದುಳಿದ ಉಪ್ಪಾರ ಜನಾಂಗಕ್ಕೆ ಸೇರಿದವಳಾಗಿರುತ್ತೇನೆ. ದಾವಣಗೆರೆ ಜಿಲ್ಲೆಯಲ್ಲಿ ಹಿಂದುಳಿದ ವರ್ಗಕ್ಕೆ ಅಥವಾ ಮಹಿಳೆಗೆ ಅವಕಾಶ ಕಲ್ಪಿಸುವುದಾದರೆ ನನ್ನ ಹೆಸರನ್ನು ಶಿಫಾರಸ್ಸು ಮಾಡಲು ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ಎಂದು ಉಮಾ ಪ್ರಕಾಶ್ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಮಾಜಿ ಮಹಾಪೌರರು. ದಾವಣಗೆರೆ ಇವರು ಪತ್ರ ಬರೆದಿದ್ದಾರೆ.