ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ ಅಧಿಕೃತವಾಗಿ ಎಲೆಕ್ಷನ್ ಪ್ರಚಾರ ಆರಂಭಿಸಿದ ಮಾಜಿ ಸಚಿವ ಮಲ್ಲಿಕಾರ್ಜುನ್

ದಾವಣಗೆರೆ: ಬಿಜೆಪಿ ಆಡಳಿತದಲ್ಲಿ ಶೇ.40ರಷ್ಟು ಭ್ರಷ್ಟಾಚಾರ ಎಲ್ಲಾ ಕಡೆ ಮಿತಿ ಮೀರಿದೆ. ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ. ಯುವಕರು, ಮಹಿಳೆಯರು, ರೈತರು ಎಲ್ಲರ ಒಲವು ಕಾಂಗ್ರೆಸ್ ಮೇಲಿದೆ ಎಂದು ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆ ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ್, ನಗದಲ್ಲಿ ಚುನಾವಣೆ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದರು.
ಕಳೆದ ಚುನಾವಣೆಗಳ ವಿಚಾರವೇ ಬೇರೆ, ಈ ಚುನಾವಣೆ ವಿಚಾರವೇ ಬೇರೆ. ಜನರು ಸುಧಾರಿಸಿದ್ದಾರೆ, ದಾವಣಗೆರೆ ಅಭಿವೃದ್ಧಿಯಾಗಬೇಕು ಎಂಬ ವಿಚಾರ ಜನರಲ್ಲಿ ಮೂಡಿದೆ ಎಂದು ಕಳೆದ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಕುರಿತು ಅವರು ಹೇಳಿದರು.
ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಏನೂ ಅಭಿವೃದ್ಧಿಯಾಗಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ್ , ಕಳೆದ ಚುನಾವಣೆಯಲ್ಲಿ ಸೋತ ನಂತರ ಕ್ಷೇತ್ರಕ್ಕೆ ಹೋಗಿಲ್ಲ ಎಂಬ ಆರೋಪ ಸುಳ್ಳು. ಬಿಜೆಪಿಯವಿಗೆ ಹೇಳಲು ಏನಾದರೊಂದು ವಿಷಯ ಬೇಕು. ಅದಕ್ಕೆ ಅವರು ಈ ರೀತಿ ಹೇಳುತ್ತಿದ್ದಾರೆ ಎಂದರು.
ನಾನು ಜನರೊಂದಿಗೆ ಸದಾ ಸಂಪರ್ಕದಲ್ಲಿದ್ದೇನೆ. ಸಾಕಷ್ಟು ಜನರು ಬಂದು ಸ್ಪರ್ಧಿಸುವಂತೆ ನನಗೆ ಒತ್ತಾಯಿಸಿದ್ದಾರೆ. ದಾವಣಗೆರೆ ಉತ್ತರ ಕ್ಷೇತ್ರದ ಜನ ಒಮ್ಮತದಿಂದ ಬೆಂಬಲ ಸೋಚಿಸಿ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಹೇಳಿದರು.