ಬಾಡಿಗೆ ಇದ್ದವರಿಗೆ ಉಚಿತ ವಿದ್ಯುತ್: ಸಿದ್ದರಾಮಯ್ಯ

ಬಾಡಿಗೆ ಇದ್ದವರಿಗೆ ಉಚಿತ ವಿದ್ಯುತ್: ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಗೊಂದಲ ಬೇಡ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಮಂಗಳವಾರ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಬಾಡಿಗೆ ಮನೆಯಲ್ಲಿ ವಾಸಿಸುವವರು ಬಹುತೇಕ ಬಡವರಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲಾಗುವುದು. ವಾಣಿಜ್ಯ ಉದ್ದೇಶದ ಬಾಡಿಗೆ ಹೊರತುಪಡಿಸಿ ಎಲ್ಲ ಬಾಡಿಗೆ ಗೃಹಗಳಿಗೂ ಉಚಿತ ವಿದ್ಯುತ್ ದೊರೆಯಲಿದೆ ಎಂದರು.

ಹಿಂದೆಯೂ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿತ್ತು. ಈಗಲೂ ಭರವಸೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದರು.

Leave a Reply

Your email address will not be published. Required fields are marked *

error: Content is protected !!