ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು: ಡಾ|| ಪ್ರಭಾ ಮಲ್ಲಿಕಾರ್ಜುನ್ ಕರೆ

ದಾವಣಗೆರೆ: ಎಸ್.ಎಸ್.ಕೇರ್ ಟ್ರಸ್ಟ್ ಹಾಗೂ ಕಾಲೇಜು ಆಫ್ ಡೆಂಟಲ್ ಸೈನ್ಸ್ ವತಿಯಿಂದ ಮಹಿಳೆಯರಿಗಾಗಿ ಉಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ,ಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರವನ್ನು ದಾವಣಗೆರೆ ಮಹಾನಗರ ೩೭ನೇ ವಾರ್ಡ್ನ ಕೆ.ಟಿ.ಜೆ.ನಗರ, ಕೆ.ಇ.ಬಿ.ಕಾಲೋನಿ, ಸಿದ್ದರಾಮೇಶ್ವರ ಬಡಾವಣೆ, ಸಿದ್ದಗಂಗಾ ಬಡಾವಣೆ, ಲೆನಿನ್‌ನಗರದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ನಗರದ ಸಿದ್ದಗಂಗಾ ಶಾಲೆ ಆವರಣದಲ್ಲಿ ನಡೆದ ಈ ಶಿಬಿರವನ್ನು ಬಾಪೂಜಿ ವಿದ್ಯಾಸಂಸ್ಥೆಯ ಸದಸ್ಯರಾದ ಶ್ರೀಮತಿ ಡಾ|| ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕೆಲಸದ ಒತ್ತಡಕ್ಕೆ ಒಳಗಾಗಿ ತಮ್ಮ ಆರೋಗ್ಯದ ಕಡೆ ಗಮನ ಹರಿಸದ ಕಾರಣ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ವಿಷಾದಿಸಿದರು.
ಮಹಿಳೆಯರ ಒತ್ತಡ ಜೀವನದಲ್ಲಿ ಆರೋಗ್ಯದ ಕಡೆ ಗಮನ ಹರಿಸದಿರುವುದನ್ನು ತಿಳಿದು ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ದಾವಣಗೆರೆ ನಗರದಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ನಿಂದ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲು ಉದ್ದೇಶಿಸಿ ಪ್ರತಿ ವಾರ್ಡ್ ಮಟ್ಟದಲ್ಲಿ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದರು.ಈ ಶಿಬಿರದಲ್ಲಿ ಮಹಿಳೆಯರಿಗೆ ಸಂಬAಧಿಸಿದAತೆ ರಕ್ತ ತಪಾಸಣೆ, ಕಣ್ಣಿನ ತಪಾಸಣೆ, ಸ್ತನ ಆರೋಗ್ಯ ತಪಾಸಣೆ, ದಂತ ತಪಾಸಣೆ, ಚರ್ಮ ಕಾಯಿಲೆಗಳು, ಗರ್ಭಕೋಶ ಹಾಗೂ ಡಯಾಬಿಟಿಕ್ ನ್ಯೂರೋಪತಿ, ಇಸಿಜಿ ಸೇರಿದಂತೆ ವಿವಿಧ ತಪಾಸಣೆಗಳನ್ನು ನಡೆಸಿ ಅವಶ್ಯಕವಾಗಿರುವವರಿಗೆ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಯನ್ನು ನಡೆಸಲಾಗುವುದು ಎಂದರು.
ಇದಲ್ಲದೇ ಎಸ್.ಎಸ್. ಕೇರ್ ಟ್ರಸ್ಟ್ ವತಿಯಿಂದ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕರ‍್ಯದರ್ಶಿ ಡಾ|| ಶಾಮನೂರು ಶಿವಶಂಕರಪ್ಪನವರು ಇತ್ತೀಚೆಗೆ ಪ್ರಕಟಿಸಿದಂತೆ ಕಿಡ್ನಿ ತೊಂದರೆ ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಸಹ ನೀಡಿಸಲಾಗುತ್ತಿದೆ ಎಂದರು.
ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಶ್ವೇತಾ ಶ್ರೀನಿವಾಸ್ ಮಾತನಾಡಿ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕರ‍್ಯದರ್ಶಿ ಡಾ|| ಶಾಮನೂರು ಶಿವಶಂಕರಪ್ಪನವರು, ಜಂಟಿ ಕರ‍್ಯದರ್ಶಿ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಮಾರ್ಗದರ್ಶನದಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಸದಸ್ಯರಾದ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಎಸ್.ಎಸ್. ಕೇರ್ ಟ್ರಸ್ಟ್ ವತಿಯಿಂದ ಮಹಿಳೆಯರಿಗೆ ಆರೋಗ್ಯ ಶಿಬಿರಗಳನ್ನು ನಡೆಸಿ ಉಚಿತವಾಗಿ ಹೆಚ್ಚಿನ ಚಿಕಿತ್ಸೆ ನೀಡುತ್ತಿರುವುದು ಬಡವರ ಪಾಲಿಗೆ ಸೌಭಾಗ್ಯವಾಗಿದ್ದು, ಮಹಿಳೆಯರು ನಿಸ್ಸಂಕೋಚವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಕರೆ ನೀಡಿದರು.
ಶಿಬಿರದಲ್ಲಿ ೩೭ನೇ ವಾರ್ಡ್ನ ಸುಮಾರು ೨೦೦ ಮಹಿಳೆಯರು ವಿವಿಧ ತಪಾಸಣೆಗೆ ಒಳಗಾದರು. ಅದರಲ್ಲಿ ೬೦ ಮಹಿಳೆಯರಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸ್ಸು ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್.ಎಸ್.ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಸುಪಾಲರಾದ ಡಾ|| ಬಿ.ಎಸ್.ಪ್ರಸಾದ್, ಉಪ ಪ್ರಾಂಶುಪಾಲರಾದ ಡಾ|| ಎ.ಅರುಣಕುಮಾರ್, ಡಾ|| ಶಾಂತಲಾ, ಡಾ|| ಅಶ್ವಿನ್, ಡಾ|| ಕಮಲೇಶ್, ಡಾ|| ಜಮೀನುಲ್ಲಾ, ಡಾ|| ಪ್ರಿಯಾಂಕ, ಡಾ|| ಶಿಲ್ಪ, ಡಾ|| ಶಿವಕುಮಾರ್, ಡಾ|| ಪ್ರಶಾಂತ್, ಸಂತೋಷ್, ಸೇವಾದಳದ ಮಣಿಕಂಠ, ಗಜೇಂದ್ರ, ಎಸ್. ಭಾಸ್ಕರ್, ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ, ಕಾಲೇಜು ಆಫ್ ಡೆಂಟಲ್ ಸೈನ್ಸ್ ವೈದ್ಯರು, ಶುಶ್ರೂಷಕರು, ಸಹಾಯಕ ಸಿಬ್ಬಂದಿ ಮತ್ತಿತರರಿದ್ದರು.