ದಾವಣಗೆರೆ: ರಾಜ್ಯ ಸರ್ಕಾರ ಬಡವರಿಗೆ ಉಚಿತವಾಗಿ 10 ಕೆ.ಜಿ ನೀಡಲು ಮಾಡಿರುವ ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಎಫ್‌ಸಿಐಗೆ ರಾಜ್ಯಕ್ಕೆ ಅಕ್ಕಿ ನೀಡದಂತೆ ತಡೆ ಹಿಡಿದಿರುವುದನ್ನು ವಿರೋದಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅಧ್ಯಕ್ಷರಾದ ಎಚ್.ಬಿ ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಹಿರಿಯ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರ ನೇತೃತ್ವದಲ್ಲಿ ನಗರದ ಜಯದೇವ ವೃತ್ತದಲ್ಲಿ ನಾಳೆ ದಿನಾಂಕ 20-06-23 ನೇ ಮಂಗಳವಾರ ಬೆಳಗ್ಗೆ 11 ಗಂಟೆಗೆ ಶಾಸಕರಾದ ಡಿ.ಜಿ. ಶಾಂತನ ಗೌಡ್ರು, ಶಿವಗಂಗಾ ಬಸವರಾಜ್, ಬಸವಂತಪ್ಪ, ದೇವೇಂದ್ರಪ್ಪ, ಲತಾ ಮಲ್ಲಿಕಾರ್ಜುನ್ ಮುಖಂಡರಾದ ಎಸ್. ರಾಮಪ್ಪ ನಂದಿಗಾವಿ ಶ್ರೀನಿವಾಸ್ ಹಾಗೂ ಕೊಟ್ರೇಶ್ ಉಪಸ್ಥಿತಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಪಕ್ಷದ ಚುನಾಯಿತ ಪ್ರತಿನಿಧಿಗಳು, ಪಕ್ಷದ ಎಲ್ಲಾ ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು, ವಾರ್ಡ್ ಮತ್ತು ಪಂಚಾಯತ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಕೋರಿದ್ದಾರೆ.
ಕೆ.ಎಲ್.ಹರೀಶ್ ಬಸಾಪುರ.
