ಇಂದಿನಿಂದ ಡಿ. 29ರವರೆಗೆ ಕರ್ನಾಟಕದಲ್ಲಿ ಹಲವೆಡೆ ಮಳೆ..!

From today D. Rain in many places in Karnataka till 29th..!

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಹಲವೆಡೆ ಸಾಧಾರಣ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಡಿ. 30ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಉಳಿದೆಡೆ ಇನ್ನೂ 3 ದಿನ ತುಂತುರು ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವುದೆಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ಕೇರಳ ಮತ್ತು ಮಾಹೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ದಟ್ಟವಾದ ಮಂಜು ಕವಿಯಲಿದೆ. ಕರಾವಳಿ ಒಡಿಶಾದಲ್ಲಿ ಮುಂಜಾನೆ ಮಂಜು ಕವಿಯಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಶೀತ ಅಲೆಯ ಪರಿಸ್ಥಿತಿಗಳಿವೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!