ಉಕ್ರೇನ್‌ನಲ್ಲಿ ಸಾವನ್ನಪ್ಪಿದ ನವೀನ್ ಪಾರ್ಥಿವ ಶರೀರಕ್ಕೆ ಅಂತಿಮ ಪೂಜೆ: ಸಂಬಂಧಿಕರ ಆಕ್ರಂದನ

ಹಾವೇರಿ : ಉಕ್ರೇನ್ ಮತ್ತು ರಷ್ಯಾ ಯುದ್ಧದಲ್ಲಿ ಸಾವನ್ನಪ್ಪಿದ್ದ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರವನ್ನ ಇಂದು ವೀರಶೈವ ಸಂಪ್ರದಾಯದ ವಿಧಿವಿಧಾನದಂತೆ ಕುಟುಂಬಸ್ಥರು ಅಂತಿಮ ಪೂಜಾ ಕಾರ್ಯಗಳನ್ನ ನೆರವೇರಿಸಿದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ ನವೀನ್ ನಿವಾಸದಲ್ಲಿ ಸುಮಾರು ಅರ್ಧ ಗಂಟೆ ಗಳ ಕಾಲ ಕುಟುಂಬಸ್ಥರು ಪೂಜೆ ನೆರವೇರಿಸಿದರು. ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ವೇಗವಾಗಿ ಪೂಜಾ ಕೈಂಕರ್ಯಗಳನ್ನು ಪೂರ್ಣಗೊಳಿಸಲಾಯಿತು.

ಮಾರ್ಚ್ 1ರಂದು ಉಕ್ರೇನ್‌ನಲ್ಲಿ ಮೃತಪಟ್ಟಿದ್ದ ನವೀನ್ ಮೃತದೇಹ 21 ದಿನಗಳ ಬಳಿಕ ಸ್ವಗ್ರಾಮ ತಲುಪಿದೆ. ಮಗನ ಮೃತದೇಹ ಕಂಡು ತಂದೆ, ತಾಯಿ ಕಣ್ಣೀರಿ ಟ್ಟಿದ್ದಾರೆ. ಡಾಕ್ಟರ್ ಆಗಿ ಬರ್ತಿನಿ ಅಂದಿದ್ದಯಲ್ಲೋ ಎಂದು ತಾಯಿ ವಿಜಯಲಕ್ಷ್ಮಿ ಎರಡು ಕೈಗಳಿಂದ ಸೆಲ್ಯೂಟ್ ಹೊಡೆದು ಮಗನಿಗೆ ಪೂಜೆ ನೆರವೇರಿಸಿದರು. ನವೀನ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಧ್ಯಾಹ್ನ 2 ಗಂಟೆಗಳವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ದಾವಣಗೆರೆಯ ಎಸ್‌ಎಸ್ ವೈದ್ಯಕೀಯ ಕಾಲೇಜಿಗೆ ತೆಗೆದುಕೊಂಡು ಹೋಗಲಾಗುವುದು ಎನ್ನಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!