ರಾಜ್ಯ ಸುದ್ದಿ

Future: ಕೋಡಿ ಶ್ರೀ ಭವಿಷ್ಯ.! ಭಾರತಕ್ಕೆ ಕಾದಿದ್ಯಾ ಗಂಡಾಂತರ.!

ಹುಬ್ಬಳ್ಳಿ: ಜಾಗತಿಕ ಮಟ್ಟದಲ್ಲಿ ಜಲಪ್ರಳಯ ಸಂಭವಿಸಿ ಒಂದೆರಡು ರಾಷ್ಟ್ರಗಳು ಮುಳುಗುವ ಸಾಧ್ಯತೆ ಇದೆ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು, ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಹೇಳಿದರು.

ಬೇರೆ ಎಲ್ಲೋ ಕಡೆ ಬಾಂಬ್‌ ಸ್ಫೋಟದಂತಹ ಘಟನೆಗಳು ಸಂಭವಿಸಿ ವಿಷಾನಿಲದಿಂದ ಭಾರತದಲ್ಲಿ ಜನರು ಅಕಾಲಿಕವಾಗಿ ಸಾವನ್ನಪ್ಪುವ ಸಂಭವ ಇದೆ ಎಂದರು.

ವಿಜಯದಶಮಿಯಿಂದ ಸಂಕ್ರಾಂತಿಯೊಳಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುವಂತ ದುರ್ಘಟನೆ ರಾಷ್ಟ್ರಮಟ್ಟದಲ್ಲಿ ನಡೆಯಲಿದೆ. ಆಳುವವರು ಅರಿತರೆ ಇದರಿಂದ ಪಾರಾಗಬಹುದು. ಕರುನಾಡಿಗೂ ಕೆಲವು ಆಪತ್ತುಗಳು ಇದ್ದು, ಸಾವು ನೋವುಗಳು ಸಂಭವಿಸಲಿವೆ ಎಂದರು.

Click to comment

Leave a Reply

Your email address will not be published. Required fields are marked *

Most Popular

To Top