ಜಿ ಎಂ ಚಾರಿಟಿ ವತಿಯಿಂದ ಆಮ್ಲಜನಕ ಉತ್ಪಾದನಾ ಘಟಕ ಉದ್ಘಾಟಿಸಿದ ನಳೀನ್ ಕುಮಾರ್ ಕಟೀಲ್

ಚಿತ್ರದುರ್ಗ: ಚಿತ್ರದುರ್ಗ ನಗರದ ಸಾರ್ವಜನಿಕ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಶ್ರೀ ಜಿ.ಮಲ್ಲಿಕಾರ್ಜುನಪ್ಪ ಶ್ರೀ ಮತಿ ಹಾಲಮ್ಮ ಚಾರಿಟಿ ಫೌಂಡೇಶನ್ (ರಿ) ಹಾಗೂ ಜಿ.ಎಂ. ಸಮೂಹದ ವತಿಯಿಂದ ನಿರ್ಮಾಣವಾದ ಆಮ್ಲಜನಕ ಉತ್ಪಾದನಾ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರಾದ ನಳೀನ್ ಕುಮಾರ್ ಕಟೀಲ್ ಹಾಗೂ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು ಉದ್ಘಾಟಿಸಿ, ಲೋಕಾರ್ಪಣೆ ಮಾಡಿದರು.
ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಹಾಗೂ ವೀರ ಮದಕರಿ ನಾಯಕ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ರವಿ ಕುಮಾರ್, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಚಂದ್ರಪ್ಪ, ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಗೌಡ, ಜಿ.ಎಸ್.ಅನಿತ್ ಕುಮಾರ್, ಅಧಿಕಾರಿಗಳು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.