ಕ್ಷೇತ್ರದ ಮಹಾಶಕ್ತಿ ಕೇಂದ್ರದಲ್ಲಿ ಜಿ.ಎಸ್. ಶ್ಯಾಮ್ ರಿಂದ ವಿಜಯ ಸಂಕಲ್ಪ ಅಭಿಯಾನದ ನಡೆ
ದಾವಣಗೆರೆ : ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹಾಶಕ್ತಿ ಕೇಂದ್ರದಲ್ಲಿ ಬರುವ ಶಕ್ತಿ ಕೇಂದ್ರದಲ್ಲಿ ಈ ಕ್ಷೇತ್ರದ ಬಿಜೆಪಿ ಪಕ್ಷದ ಪ್ರಬಲ ಆಕಾಂಕ್ಷಿ ಜಿ.ಎಸ್. ಶ್ಯಾಮ್ ವಿಜಯ ಸಂಕಲ್ಪ ಅಭಿಯಾನ ನಡೆಸಿ ತಮ್ಮ ಪಕ್ಷಕ್ಕೆ ಬೆಂಬಲ ನೀಡುವಂತೆ ಮತದಾರರ ಸೆಳೆಯುವ ಪ್ರಯತ್ನ ಮಾಡಿದರು.
ತ್ಯಾವಣಿಗಿ ಮಹಾಶಕ್ತಿ ಕೇಂದ್ರದಲ್ಲಿ ಬರುವ ಶಕ್ತಿ ಕೇಂದ್ರಗಳಾದ ನಲ್ಕುದ್ರೆ, ನವಿಲೇಹಾಳ್, ಕಣಿವೆಬಿಳಚಿ ಗ್ರಾಮಗಳಲ್ಲಿ ಬಿಜೆಪಿ ಪಕ್ಷ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಗೆಲುವಿಗಾಗಿ ನಡೆಸುತ್ತಿರುವ ವಿಜಯ ಸಂಕಲ್ಪ ಅಭಿಯಾನ ಪ್ರಯುಕ್ತ ಗ್ರಾಮದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಮನೆ ಮನೆಗೆ ತೆರಳಿ ಆಡಳಿತ ಪಕ್ಷ ಬಿಜೆಪಿ ಸರ್ಕಾರದ ಯೋಜನೆಗಳು, ಸಾಧನೆ, ಮುಂದೆಯೂ ಅಧಿಕಾರಕ್ಕೆ ಬಂದರೆ ಕೈಗೊಳ್ಳುವ ಜನಪರ ಕಾರ್ಯಕ್ರಮಗಳ ಮಾಹಿತಿಯುಳ್ಳ ಕರಪತ್ರ ಹಂಚ್ಚುವ ಜೊತೆಗೆ ಮಿಸ್ ಕಾಲ್ ನೀಡಿ ಅಭಿಯಾನಕ್ಕೆ ಬೆಂಬಲ ಕೋರಲಾಯಿತು.
ಪಕ್ಷದಿಂದ ಈ ಕ್ಷೇತ್ರದಲ್ಲಿ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿರುವ ತಮಗೆ ಅವಕಾಶ ನೀಡುವಂತೆ ಮನವಿ ಮಾಡಿದರು