ಜಿ. ಎಂ ಹಾಲಮ್ಮ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
ದಾವಣಗೆರೆ : 23 ಮತ್ತು 24 ರಂದು ನಗರದ ಜಿಎಂ ಹಾಲಮ್ಮ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ನಿವಾರಣೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವತಯಾರಿಯ ಕುರಿತು ಎರಡು ದಿನದ ವಿಶೇಷ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಎರಡು ದಿನದ ಕಾರ್ಯಗಾರವನ್ನು ದಾವಣಗೆರೆ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಅಂಬಣ್ಣ ಹಾಗೂ ಜಿಲ್ಲಾ ಉಪ ನಿರ್ದೇಶಕರಾದ ಶಿವರಾಜು ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಮತ್ತು ಮುಖ್ಯ ಕೇಂದ್ರಬಿಂದುವಾದ ಜಗನ್ನಾಥ್ ನಾಡಿಗೇರ್‌ರವರು ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿಯ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು. ಕನಸುಗಳು ಭವಿಷ್ಯದಲ್ಲಿ ನಿಜವಾಗುವ ಸಾಧ್ಯತೆಗಳು ಇರುತ್ತವೆ ಹಾಗಾಗಿ ಉನ್ನತ ಹುದ್ದೆಗಳನ್ನು ಪಡೆಯುವ ಕನಸುಗಳನ್ನು ಕಾಣಬೇಕು ಮತ್ತು ಅವುಗಳನ್ನು ನನಸು ಮಾಡಲು ಸದಾ ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ನಂತರ ಮುಂದೇನು ಎಂಬ ಗೊಂದಲದ ಪ್ರಶ್ನೆಗಳಿಗೆ ಸೂಕ್ತ ವಿವರಣೆ ಮತ್ತು ಮಾರ್ಗದರ್ಶನವನ್ನು ನೀಡುತ್ತಾ ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಈ ಎರಡು ದಿನದ ಕಾರ್ಯಗಾರದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟ್ ರಾಯುಡು ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.