ಬೇರೆಯವರ ಧರ್ಮಕ್ಕೆ ಧಕ್ಕೆ ತರದೆ ಈದ್, ಗಣೇಶ ಹಬ್ಬ ಆಚರಿಸಿ: ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ: ಬೇರೆಯವರ ಧರ್ಮಕ್ಕೆ ಧಕ್ಕೆ ತರದೆ ಈದ್, ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಎಸ್ಪಿ ಉಮಾ ಪ್ರಶಾಂತ್ ಅವರು ತಿಳಿಸಿದರು.

ದಾವಣಗೆರೆ ನಗರದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಈದ್ ಮಿಲಾದ್ ಮತ್ತು ಗಣೇಶ ಹಬ್ಬದ ಶಾಂತಿ ಸೌಹಾರ್ಧ ಸಭೆಯಲ್ಲಿ ಅಧ್ಯಕ್ಷ ವಹಿಸಿ ಮಾತನಾಡಿದ ಅವರು, ಎಲ್ಲರೂ ಅವರ ಅವರ ಧರ್ಮ, ಸಂಸ್ಮೃರಿಯನ್ನು ಅನುಸರಿಸಿ ಆದರೆ ಬೇರೆಯವರ ಧರ್ಮಕ್ಕೆ ಧಕ್ಕೆ ತರದೆ ಈದ್ ಮಿಲಾದ್, ಗಣೇಶ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿ ಎಂದು ಕರೆ ನೀಡಿದರು.

ನಾವೆಲ್ಲರೂ ಭಾರತೀಯರಾಗಿದ್ದು, ಇಲ್ಲಿನ ಸಂಸ್ಕೃತಿಗಳಿಗೆ ಬೆಲೆ ಕೊಡುವುದನ್ನು ತಿಳಿದುಕೊಳ್ಳಬೇಕು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸ್ವಾತಂತ್ರವಿದೆ. ಆದರೆ ಸ್ವಾತಂತ್ರ ಸ್ವೇಚ್ಛಾಚಾರವಾಗಬಾರದು ಎಂದ ಅವರು ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿ ಸಹಾಯ ಬೇಕು ಎಂದರೆ 112 ಮೂಲಕ ಪೊಲೀಸರಿಗೆ ಕರೆ ಮಾಡಿ ಎಂದರು.
ನಿಗಧಿಪಡಿಸಿದ ರಸ್ತೆಗಳಲ್ಲೇ ಸಾಗಿ, ನಿಗಧಿತ ಸ್ಥಳಗಳಲ್ಲೇ ಗಣೇಶ ವಿಸರ್ಜನೆಯನ್ನು ಮಾಡಬೇಕು ಎಂದು ಸೂಚಿಸಿದ ಅವರು, ಯಾವುದೇ ಕಾರಣಕ್ಕೂ ಗಣೇಶ ವಿಸರ್ಜನೆ ಮೆರವಣಿಗೆಯ ಮಾರ್ಗವನ್ನು ಬದಲಾಯಿಸಬಾರದು. ನಿಗಧಿ ಮಾರ್ಗದಲ್ಲಿ ಸಂಚರಿಸುವಾಗಲೂ ಸೂಕ್ಷ್ಮ ಪ್ರದೇಶದಲ್ಲಿ ಬೇಕಾಬಿಟ್ಟಿ ವರ್ತಿಸಬಾರದು ಎಂದರು.

ಒಟ್ಟಾರೆಯಾಗಿ ಪೊಲೀಸರು ಸೂಚನೆಯಂತೆ ನಡೆದುಕೊಳ್ಳುವ ಮೂಲಕ, ಎಲ್ಲರು ಶಾಂತಿ, ಸೌಜನ್ಯಯುತವಾಗಿ, ಸಡಗರ ಸಂಭ್ರಮದಿಂದ ಈದ್ ಮಿಲಾದ್ ಮತ್ತು ಗಣೇಶ ಹಬ್ಬವನ್ನು ಆಚರಿಸಿ ಎಂದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ವಿಜಯಕುಮಾರ ಎಂ ಸಂತೋಷ, ಶ್ರೀ ಜಿ. ಮಂಜುನಾಥ ರವರು, ನಗರ ಡಿವೈಎಸ್ಪಿ ರವರಾದ ಶ್ರೀ ಮಲ್ಲೇಶ್ ದೊಡ್ಡಮನಿ ರವರು ಸೇರಿದಂತೆ ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!