Ganesha Guidelines: ಗಣೇಶನಿಗೆ ಕಠಿಣ ಮಾರ್ಗಸೂಚಿ | ಕಂಡಿಷನ್ ಬ್ರೇಕ್ ಮಾಡಿದ್ರೆ ಶಿಸ್ತು ಕ್ರಮ

 

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಕೆಲವು ಮಾರ್ಗಸೂಚಿ ಅನುಸರಿಸಲು ತಾಕೀತು ಮಾಡಿ ಸರ್ಕಾರ ಅನುಮತಿ ನೀಡಿದ್ದು, ಉಲ್ಲಂಘಿಸುವವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಸರಳವಾಗಿ ಕಡಿಮೆ ಜನರನ್ನು ಸೇರಿಸಿಕೊಂಡು ಗಣೇಶೋತ್ಸವ ಆಚರಿಸುವಂತೆ ತಿಳಿಸಲಾಗಿದ್ದು, ಸಾರ್ವಜನಿಕವಾಗಿ ಕೂರಿಸುವ ಗಣೇಶ ಮೂರ್ತಿಗಳು ನಾಲ್ಕು ಅಡಿ ಮೀರಬಾರದು, ಹಾಗೂ ಮನೆಗಳಲ್ಲಿ ಎರಡು ಅಡಿಗಿಂತ ಹೆಚ್ಚಿರದ ಗಣೇಶನನ್ನು ಕೂರಿಸಬೇಕು. ವಾರ್ಡಿಗೆ ಒಂದರಂತೆ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದೆ.
ಮುನಿಸಿಪಲ್ ಕಾರ್ಪೋರೇಷನ್ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು ಒಂದು ನಗರ ಪ್ರದೇಶಗಳಲ್ಲಿ ಗಣೇಶ ಪ್ರತಿಷ್ಟಾಪನೆಗೆ ಆಯೋಜಕರು ಮುನಿಸಿಪಲ್ ಕಾರ್ಪೋರೇಷನ್ ಅಥವಾ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯತಕ್ಕದ್ದು, ಹಾಗೂ ಆಯೋಜಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿ ಮತ್ತು ಲಸಿಕೆಯನ್ನು ಹಾಕಿಸಿಕೊಂಡಿರಬೇಕು.

ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಬೇಕು, ಪ್ರತಿಷ್ಟಾಪನೆ ಮಾಡಿರುವ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ / ಸಂಗೀತ / ನೃತ್ಯ ಹಾಗೂ ಮುಖ್ಯವಾಗಿ ಡಿ.ಜೆ.ಯ ಮೂಲಕ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿಲ್ಲ‌. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಮೆರವಣಿಗೆ ಮಾಡುವಂತಿಲ್ಲ.

ಗಣೇಶೋತ್ಸವ ಆಚರಿಸುವ ದೇವಸ್ಯಾನ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡಿ, ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್‌ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು. ದರ್ಶನಕ್ಕೆ ಬರುವ ಭಕ್ತರು ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಸರ್ಕಾರ ಆದೇಶಿಸಿದೆ.

Leave a Reply

Your email address will not be published. Required fields are marked *

error: Content is protected !!