ಗಣೇಶೋತ್ಸವಕ್ಕೆ ತಜ್ಞರ ಜೊತೆ ಚರ್ಚಿಸಿದ ನಂತರ ಅನುಮತಿಗೆ ಕ್ರಮ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

IMG-20210827-WA0019

ಬೆಂಗಳೂರು : ಸಾರ್ವಜನಿಕವಾಗಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ತಜ್ಞರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು . ಬೆಂಗಳೂರಿನ ನಿವಾಸದಲ್ಲಿ ಮಾತನಾಡಿದ ಅವರು ,
ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂಬ ಒತ್ತಡಗಳು ಇದ್ದು . , ತಜ್ಞರ ಜತೆ ಚರ್ಚಿ ನೆಡಿಸಿದ ನಂತರವೇ ಅನುಮತಿ ಕೊಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು .
ಕೊರೊನಾ 3 ನೇ ಅಲೆಯನ್ನು ತಡೆಯಲು ಕೈಗೊಳ್ಳಬೇಕಾದ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಚರ್ಚಿಸಲು ತಜ್ಞರ ಸಭೆ ಕರೆದಿದ್ದು
.ಈ ಸಭೆಯಲ್ಲಿ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸಲು ಅನುಮತಿ ನೀಡಬೇಕೇ ಬೇಡವೇ ಎಂಬ ಬಗ್ಗೆ ತಜ್ಞರ ಜತೆ ಚರ್ಚಿಸುತ್ತೇನೆ . ತಜ್ಞರ ಸಲಹೆ ಮೇರೆಗೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದರು . ಕೋವಿಡ್ ಕಾರಣದಿಂದ ರಾಜ್ಯಸರ್ಕಾರ ಈ ಬಾರಿ ಸಾರ್ವಜನಿಕ ಗಣೇಶೋತ್ಸವ ನಿರ್ಬಂಧ ವಿಧಿಸಿತ್ತು . ಇದಕ್ಕೆ ಹಲವು ಶಾಸಕರು , ಸಂಸದರು ವಿರೋಧ ವ್ಯಕ್ತಪಡಿಸಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಿದರೆ .

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!