ಜಾತ್ರೆಯಿಂದ ಬರುವ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

Gang rape of two girls coming from the fair

ಜಾತ್ರೆಯಿಂದ ಬರುವ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಫತೇಪುರ: ಗ್ರಾಮದಲ್ಲಿ ನಡೆಯುತ್ತಿದ್ದ ಜಾತ್ರೆ ಮುಗಿಸಿಕೊಂಡು ಬರುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಆರು ಜನರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕರಾರಿ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಫತೇಪುರ ಪೊಲೀಸ್‌ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್‌ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಹುಸೈಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 ಡಿ, 342, 323, 504, 506 ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಾಲಕಿಯರ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಗಳಿಂದ ಖಚಿತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!