ಗಾಂಜಾ ಮಾರಾಟ ಮಾಡಲು ಹೋಗಿ ಪೊಲೀಸರ ಅತಿಥಿಯಾದ ನಾಲ್ಕು ಜನ

ಶಿವಮೊಗ್ಗ: ಶಿವಮೊಗ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ‌ ಮಾರಾಟ ಮಾಡುತ್ತಿದ್ದ ವೇಳೆ ನಾಲ್ಕು ಜನರನ್ನು ಪೊಲೀಸರು‌ ಬಂಧಿಸಿದ್ದಾರೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಹತ್ತಿರ ಯಾರೋ 04 ಜನ ವ್ಯಕ್ತಿಗಳು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕೋಟೆ ಪೊಲೀಸ್ ಠಾಣೆಯ ಪಿ ಐ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳ ತಂಡವು ದಾಳಿ ನಡೆಸಿ ರಾಯಚೂರು ಜಿಲ್ಲೆಯ ಇಬ್ಬರು ಆರೋಪಿತರು ಹಾಗೂ ಶಿವಮೊಗ್ಗ ನಗರದ ಇಬ್ಬರು ಆರೋಪಿತರನ್ನು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ.

ಒಟ್ಟು 04 ಜನರನ್ನು ಬಂಧಿಸಿ, ಆರೋಪಿತರ ಸುಮಾರು ಒಂದು‌ ಲಕ್ಷದ , ಆರವತೈದು ಸಾವಿರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಒಟ್ಟು 2 ಕೆಜಿ 782 ಗ್ರಾಂ ತೂಕದ ಒಣ ಗಾಂಜಾ ಹಾಗೂ 02 ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಂಡು ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಲಂ 20(b) NDPS ಕಾಯ್ದೆ ರಿತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!