ಸಿಲಿಂಡರ್ ಸ್ಫೋಟ ಪ್ರಕರಣ: ಕುಟುಂಬಕ್ಕೆ ಸಾಂತ್ವಾನ ಹೇಳಿದ ಶಾಸಕ ಮಾಡಾಳು ವಿರೂಪಾಕ್ಷಪ್ಪ
ದಾವಣಗೆರೆ: ನಿನ್ನೆ ಶನಿವಾರ ರಾತ್ರಿ ಚನ್ನಗಿರಿ ತಾಲ್ಲೂಕಿನ ಮಾವಿನಹೋಳೆ ಗ್ರಾಮದಲ್ಲಿ ಸಂಭವಿಸಿದ ಅಡುಗೆ ಸಿಲಿಂಡರ್ ಸ್ಪೋಟಗೊಂಡು ನಡೆದ ಅಗ್ನಿ ದುರಂತದ ಘಟನೆಗೆ ಸಂಬಂಧಿಸಿ ಇಂದು ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಗ್ರಾಮಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಧೈರ್ಯತುಂಬಿ 25 ಸಾವಿರ ರೂ., ಧನಸಹಾಯ ಮಾಡಿದರು.
ಶನಿವಾರ ರಾತ್ರಿ ತುಂಬಿದ್ದ ಸಿಲಿಂಡರ್ ಗೆ ಕನೆಕ್ಷನ್ ಕೊಡುವ ವೇಳೆ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಓರ್ವ ಮಹಿಳೆ ಗಂಭೀರ ಗಾಯಗೊಂಡು ತಾಲ್ಲೂಕಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಕಿ ದಟ್ಟಣೆಗೆ ಮನೆಯಲ್ಲಿದ್ದ ವಸ್ತುಗಳು ಸೇರಿ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿತ್ತು.
ಆದ್ದರಿಂದ, ಇಂದು ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ಹೇಳಿ ₹25 ಸಾವಿರ ನೆರವು ನೀಡಿದರು.