ಶಿರಾಡಿ: ಗ್ಯಾಸ್ ಟ್ಯಾಂಕರ್‌ ಪಲ್ಟಿ, ಗ್ಯಾಸ್ ಸೋರಿಕೆ: ವಾಹನ ಸಂಚಾರ ಬಂದ್‌ ಬದಲಿ ಮಾರ್ಗ ಮೂಲಕ ತೆರಳಲು ಸೂಚನೆ

ಶಿರಾಡಿ : ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್‌ನಲ್ಲಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ವೊಂದು ಪಲ್ಟಿಯಾಗಿ ಟ್ಯಾಂಕ‌ರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹೆದ್ದಾರಿಯ ತಿರುವಿನ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ.. ಮಾರ್ಗಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ನೂರಾರು ವಾಹನಗಳು ನಿಂತಲ್ಲೆ ನಿಂತಿವೆ.

ಬೆಂಗಳೂರು-ಹಾಸನ-ಮಂಗಳೂರು:
ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದರ ಪೊಲೀಸರು ಕಳುಹಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ಆಗಮಿಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದು, ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ. ಪಲ್ಟಿಯಾದ ಗ್ಯಾಸ್ ಟ್ಯಾಂಕರ್‌ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ. ಹೀಗಾಗಿ ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.

Leave a Reply

Your email address will not be published. Required fields are marked *

error: Content is protected !!