ದಾವಣಗೆರೆಗೆ ಗಾಯತ್ರಿ ಸಿದ್ದೇಶ್ವರ; ಅಚ್ಚರಿಯ 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಇಂದು ಪ್ರಕಟವಾಗಿದೆ. ಇದರಲ್ಲಿ ಒಟ್ಟು 72 ಕ್ಷೇತ್ರಗಳಿಗೆ ಎರಡನೇ ಪಟ್ಟಿಯಲ್ಲಿ ಟಿಕೆಟ್ ಸಿಕ್ಕಿದೆ. ಈ ಮೊದಲು 195 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ.
ತೀವ್ರ ಕುತೂಹಲ ಕೆರಳಸಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ಘೋಷಣೆಯಾಗಿದೆ.
ಇದರೊಂದಿಗೆ ಬಿಜೆಪಿ ಇಲ್ಲಿವರೆಗೆ ಒಟ್ಟು 267 ಕ್ಷೇತ್ರಗಳಿಗೆ ಟಿಕೆಟ್ ನೀಡಿದಂತಾಗಿದೆ. ಇನ್ನೂ 276 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿಯಿದೆ.
ಕರ್ನಾಟಕದಲ್ಲಿ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ.
ಕರ್ನಾಟಕದಲ್ಲಿ ಟಿಕೆಟ್ ಪಡೆದವರು
ಚಿಕ್ಕೋಡಿ: ಅಣ್ನಾ ಸಾಹೇಬ್ ಶಂಕರ್ ಜೊಲ್ಲೆ
ಬಾಗಲಕೋಟೆ: ಪಿ.ಸಿ ಗದ್ದಿಗೌಡರ
ಬಿಜಾಪುರ: ರಮೇಶ ಜಿಗಜಿಣಗಿ
ಗುಲ್ಬರ್ಗ: ಡಾ. ಉಮೇಶ್ ಜಾಧವ್
ಬೀದರ್: ಭಗವಂತ ಖೂಬಾ
ಕೊಪ್ಪಳ: ಬಸವರಾಜ ಕ್ಯಾವತ್ತೂರ
ಬಳ್ಳಾರಿ: ಶ್ರೀರಾಮುಲು
ಹಾವೇರಿ: ಬಸವರಾಜ ಬೊಮ್ಮಾಯಿ
ಧಾರವಾಡ: ಪ್ರಲ್ಹಾದ ಜೋಶಿ
ದಾವಣಗೆರೆ: ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ: ಬಿ.ವೈ ರಾಘವೇಂದ್ರ
ಉಡುಪಿ–ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ: ಕ್ಯಾ. ಬ್ರಿಜೇಶ್ ಚೌಟ
ತುಮಕೂರು: ವಿ. ಸೋಮಣ್ಣ
ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ: ಎಸ್. ಬಾಲರಾಜ್
ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್ ಮಂಜುನಾಥ್
ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್
ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ