ಜಿಎಂಐಟಿ: ಮೆಕ್ಯಾನಿಕಲ್ ವಿಭಾಗದಿಂದ ಪೋಷಕರ ಸಭೆ

IMG-20211113-WA0100

ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದಿಂದ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ದಿನಾಂಕ 13 ನೇ ಶನಿವಾರದಂದು ಮೆಕ್ಯಾನಿಕಲ್ ವಿಭಾಗದ ಸೆಮಿನಾರ್ ಹಾಲಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಮೂರನೇ ಮತ್ತು ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಗಳು ಈ ಸಭೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ ವಿಜಯಕುಮಾರ್, ಪೋಷಕರು ಗಳು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಬೆಂಬಲ ಮತ್ತು ಸಹಕಾರ ನೀಡುವುದರ ಮೂಲಕ ಅವರ ಏಳಿಗೆಗೆ ಸಹಕರಿಸಬೇಕೆಂದು ಕೋರಿದರು. ಮಕ್ಕಳಲ್ಲಿ ಆತ್ಮಸ್ಥೈರ್ಯ ಬೆಳೆಸುವುದರ ಮೂಲಕ ಅವರ ಕಲಿಕೆಗೆ ಒತ್ತು ನೀಡಬೇಕಾಗಿದೆ ಎಂದು ತಿಳಿಸಿದರು.

ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಮಾತನಾಡಿ, ಮುಂದಿನ ದಿನಗಳಲ್ಲಿ ಮೆಕ್ಯಾನಿಕಲ್ ವಿಭಾಗಕ್ಕೆ ಪ್ರಾಮುಖ್ಯತೆ ಇದ್ದು ಹಲವು ಕಂಪನಿಗಳು ನೇಮಕಾತಿಯನ್ನು ಮಾಡಿಕೊಳ್ಳಲಿವೆ ಎಂದು ತಿಳಿಸಿದರು. ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ವಿಭಾಗದ ಮುಖ್ಯಸ್ಥರಾದ ಡಾ ಶ್ರೀನಿವಾಸ್ ಸಿ ವಿ, ವಿದ್ಯಾರ್ಥಿಗಳ ಕಾರ್ಯಕ್ಷಮತೆಯ ವರದಿಯನ್ನು ಪೋಷಕರುಗಳಿಗೆ ತಿಳಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ವಿಭಾಗದ ಅಧ್ಯಾಪಕರಾದ ಶ್ರೀ ಮಲ್ಲಿಕಾರ್ಜುನ್ ಎಂ ಎಸ್ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್, ವಿಭಾಗದ ಮುಖ್ಯಸ್ಥರಾದ ಡಾ ಶ್ರೀನಿವಾಸ್ ಸಿ ವಿ, ಡಾ ಬಸವರಾಜಪ್ಪ ಡಿ, ವಿಭಾಗದ ಅಧ್ಯಾಪಕರುಗಳು, ಪೋಷಕರು ಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!