ಬೆಂಗಳೂರು: ನಿನ್ನೆ ನಿಧನರಾದ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನವನ್ನು ದಾವಣಗೆರೆಯ ಸಂಸದ ಜಿಎಂ ಸಿದ್ದೇಶ್ವರ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಪಡೆದರು.
ನಂತರ ಪುನೀತ್ ರಾಜಕುಮಾರ್ ಅವರ ಧರ್ಮಪತ್ನಿ ಅಶ್ವಿನಿ ಅವರಿಗೆ ಸಾಂತ್ವನ ಹೇಳಿ ದುಃಖ ಭರಿಸುವ ಶಕ್ತಿ ಭಗವಂತನು ಕೊಡಲಿ ಎಂದು ಆಶಿಸಿದರು