ಜಿ ಎಂ ಟ್ರಸ್ಟ್ ನಿಂದ ಆಮ್ಲಜನಕ ಘಟಕ ಸ್ಥಾಪನೆ: ಹರಿಹರಕ್ಕೆ ಭೇಟಿ ನೀಡಿದ ಸಂಸದ ಜಿ ಎಂ ಸಿದ್ದೇಶ್ವರ

ಹರಿಹರ: ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಶ್ರೀ ಜಿ.ಮಲ್ಲಿಕಾರ್ಜುನಪ್ಪ ಶ್ರೀ ಮತಿ ಹಾಲಮ್ಮ ಚಾರಿಟಿ ಫೌಂಡೇಶನ್ (ರಿ) ಹಾಗೂ ಜಿ.ಎಂ. ಸಮೂಹದ ವತಿಯಿಂದ ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು ಸ್ಥಳ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಸಂಸದರ ಕುಟುಂಬದವರು, ಜಿಲ್ಲಾಧಿಕಾರಿಗಳಾದ ಮಹಾಂತೇಶ್ ಬೀಳಗಿ, ವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.