ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಇತ್ತೀಚಿಗೆ ನಡೆದ ವಿಪ್ರೋ ಕಂಪನಿಯ ಸಂದರ್ಶನದಲ್ಲಿ 52 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. 52 ಆಯ್ಕೆಯಾದ ವಿದ್ಯಾರ್ಥಿಗಳ ಜೊತೆಗೆ ಇನ್ನೂ ಹಲವು ವಿದ್ಯಾರ್ಥಿಗಳ ಫಲಿತಾಂಶ ನಿರೀಕ್ಷೆಯಲ್ಲಿದ್ದೇವೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ 27 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಮತ್ತು 11 ವಿದ್ಯಾರ್ಥಿಗಳು ಎಸ್ ಎಲ್ ಕೆ ಕಂಪನಿಗೆ ಮತ್ತು ಬಹುರಾಷ್ಟ್ರೀಯ ಕಂಪನಿಗಳಿಗೆ ಆಯ್ಕೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್
ಕಾಲೇಜಿನಲ್ಲಿರುವ ಮೂಲಭೂತ ಸೌಕರ್ಯ ಹಾಗೂ ಅಧ್ಯಾಪಕರುಗಳ ಪ್ರೋತ್ಸಾಹ, ಪ್ರಾಂಶುಪಾಲರ ಬೆಂಬಲ ಮತ್ತು ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಕಾರದಿಂದ ಈ ಒಂದು ಫಲಿತಾಂಶ ಬಂದಿದೆ ಎಂದು ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಆದ ಶ್ರೀ ಜಿ ಎಂ ಲಿಂಗರಾಜು, ಆಡಳಿತಾಧಿಕಾರಿ ಶ್ರೀ ವೈ ಯು ಸುಭಾಷ್ ಚಂದ್ರ, ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಅಧ್ಯಾಪಕ ವರ್ಗದವರು ಅಭಿನಂದನೆಯನ್ನು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನೂ ಬಹುರಾಷ್ಟ್ರೀಯ ಕಂಪನಿಗಳು ಇದೇ ವರ್ಷದ ವಿದ್ಯಾರ್ಥಿಗಳಿಗೆ ಅಂದರೆ 2022 ಹೊರಹೋಗುವ ವಿದ್ಯಾರ್ಥಿಗಳಿಗೆ ಲಭ್ಯವಿದ್ದು, ಅವುಗಳೆಂದರೆ ಹಿಟಾಚಿ, ಹೆಚ್ ಸಿ ಎಲ್ ಟೆಕ್ನಾಲಜೀಸ್, ಹೆಕ್ಸಾವೇರ್ ಟೆಕ್ನೋಲಜಿಸ್, ಟಾಟಾ ಎಲ್ಎಕ್ಸಸಿ, ರೋಬೋಸಾಫ್ಟ್ ಟೆಕ್ನೋಲಜಿಸ್, ಸೋನಾಟಾ ಸಾಫ್ಟ್ವೇರ್, ಎಂಪೋಸಿಸ್, ಮೈಂಡ್ ಟ್ರೀ, ಎನ್ ಟಿಟಿ ಡಾಟಾ, ಆಟೋಸ್ ಸಿಂಟೆಲ್, ವಿಲೇ ಎಂತ್ರಿ, ಸಿಎಸ್ಎಸ್ ಕಾರ್ಪ, ಕೆರಿಯರ್ ಲ್ಯಾಬ್, ಭಹವನ್ ಸೈಬರ್ ಟೆಕ್, ವರ್ಚುಸ, ಮಿಲೇಕಲ್ ಕಂಪನಿ, ಕ್ರೀತಿ ಟೆಕ್ನಾಲಜಿ ಮತ್ತು ಹಲವು ಕಂಪನಿಗಳು ಸಂದರ್ಶನವನ್ನು ನಡೆಸಲಿದ್ದು ಹೆಚ್ಚಿನ ವಿದ್ಯಾರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಮತ್ತು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.