ಬೆಂಗಳೂರಿನ ಹೆಸರಾಂತ ಕೆರಿಯರ್ ಲ್ಯಾಬ್ಸ್ ನೊಂದಿಗೆ ಜಿಎಂಐಟಿ ಒಪ್ಪಂದ
ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ಜಿ ಎಂ ತಾಂತ್ರಿಕ ಮಹಾವಿದ್ಯಾಲಯವು ಇತ್ತೀಚಿಗೆ ನಡೆದ ಬೆಳವಣಿಗೆಯಲ್ಲಿ ಬೆಂಗಳೂರಿನ ಹೆಸರಾಂತ ಸಂಸ್ಥೆಯಾದ ಕೆರಿಯರ್ ಲ್ಯಾಬ್ಸ್ ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.
ಈ ಒಪ್ಪಂದದಿಂದ ವಿದ್ಯಾರ್ಥಿಗಳಿಗೆ ಇತ್ತೀಚಿನ ತಾಂತ್ರಿಕ ವಿಷಯಗಳಾದ ಐಓಟಿ, ಡೇಟಾ ಸೈನ್ಸ್, ಕ್ಲೌಡ್ ಕಂಪ್ಯೂಟಿಂಗ್, ಪೈತಾನ್, ಬ್ಲಾಕ್ ಚೈನ್, ಡೇಟಾ ಅನಾಲಿಟಿಕ್ಸ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಮಷೀನ್ ಲರ್ನಿಂಗ್, ರೋಬೋಟಿಕ್ಸ್, ರೋಬೋಟಿಕ್ ಪ್ರೋಸಸ್ ಅಟೋಮೇಶನ್ ಇನ್ನೂ ಅನೇಕ ತಾಂತ್ರಿಕ ವಿಷಯಗಳ ಮೇಲೆ ತರಬೇತಿಯನ್ನು ನೀಡಿ ಹೆಚ್ಚಿನ ಪ್ಯಾಕೇಜ್ ನೀಡುವ ಕಂಪನಿಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಮೊದಲ ಆದ್ಯತೆಯನ್ನು ನೀಡುವುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆರಿಯರ್ ಲ್ಯಾಬ್ಸ್ ಸಂಸ್ಥೆಯು ಹೆಸರಾಂತ ಬೈಜೂಸ್ ಸಂಸ್ಥೆಯ ಅಂಗ ಸಂಸ್ಥೆಯಾಗಿದ್ದು, ಗುಣಮಟ್ಟದ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳನ್ನು ಕೈಗಾರಿಕೆಗಳಿಗೆ ಬೇಕಾದಂತೆ ತಯಾರುಮಾಡುವ ಜವಾಬ್ದಾರಿ ಹೊಂದಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.
ಈ ಒಪ್ಪಂದದಿಂದ ಜಿಎಂಐಟಿ ಸಂಸ್ಥೆಯಲ್ಲಿ ತಾಂತ್ರಿಕ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಇದರ ಸಂಪೂರ್ಣ ಉಪಯೋಗವನ್ನು ಪಡೆದುಕೊಳ್ಳಲಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.
ಒಪ್ಪಂದದ ಕಾರ್ಯಕ್ರಮದಲ್ಲಿ ಕೆರಿಯರ್ ಲ್ಯಾಬ್ಸ್ ನ ಹಿರಿಯ ಅಧಿಕಾರಿಗಳಾದ ಅಭಿಷೇಕ್ ಮತ್ತು ಮಾರ್ಕ್ ಉಪಸ್ಥಿತರಿದ್ದರು. ಕಾಲೇಜಿನ ವತಿಯಿಂದ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ ಸಂಜಯ್ ಪಾಂಡೆ ಎಂ ಬಿ, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ಹಾಗೂ ಇತರರು ಪಾಲ್ಗೊಂಡಿದ್ದರು.
www.garuda voice.com 9740365719