ಜಿಎಂಐಟಿ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ದಾಖಲೆಯ ನೇಮಕಾತಿ – ತೇಜಸ್ವಿ ಕಟ್ಟಿಮನಿ ಟಿ ಆರ್
ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾ ವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ದಾಖಲೆಯ ನೇಮಕಾತಿ ಯಾಗಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.
ಒಟ್ಟು 43 ಕಂಪನಿಗಳಿಂದ ನಡೆದ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 351 ವಿದ್ಯಾರ್ಥಿಗಳು ಇದುವರೆಗೂ ಆಯ್ಕೆಯಾಗಿದ್ದು, 7ನೇ ಸೆಮಿಸ್ಟರ್ ನಲ್ಲೆ ಇಷ್ಟೊಂದು ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಇದೇ ಮೊದಲು ಎಂದು ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ತಿಳಿಸಿದ್ದಾರೆ. ಇನ್ನು ಹಲವು ಕಂಪನಿಗಳ ಸಂದರ್ಶನ ಪ್ರಕ್ರಿಯೆಯ ಪಲಿತಾಂಶ ನಿರೀಕ್ಷೆಯಲ್ಲಿದ್ದು, ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಆಯ್ಕೆಯಾಗುವ ಸಂಭವವಿದೆ ಎಂದು ಇದೇ ವೇಳೆ ತಿಳಿಸಿದರು.
ಎಲ್ಲಾ ವಿದ್ಯಾರ್ಥಿಗಳಿಗೆ ಅವರವರ ಆಸಕ್ತಿಯ ಅನುಗುಣವಾಗಿ ತರಬೇತಿಯನ್ನು ನೀಡಲಾಗುತ್ತಿದ್ದು, ಕಂಪನಿಗಳಿಗೆ ಹೋಗಲಿಚ್ಚಿಸುವ, ವಾಣಿಜ್ಯೋದ್ಯಮಿಗಳಾಗ ಬಯಸುವ, ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕೆ ಹೋಗಬಯಸುವ, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ ತರಬೇತಿಗಳನ್ನು ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿಯನ್ನು ನಿರೀಕ್ಷಿಸಬಹುದಾಗಿದೆ ಎಂದು ಇದೇ ವೇಳೆ ತಿಳಿಸಿದರು.
ಎಲ್ಲಾ ವಿದ್ಯಾರ್ಥಿಗಳು ಅವರು ಬಯಸಿದ ದಾರಿಯಲ್ಲಿ ಯಶಸ್ಸು ಸಿಗಲೆಂದು ಆಡಳಿತ ಮಂಡಳಿಯು ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತಿದೆ. ವಿದ್ಯಾರ್ಥಿಗಳ ಸ್ಟಾರ್ಟಪ್ ಕಂಪನಿಗಳಿಗೂ ಸಹಾಯಹಸ್ತವನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸುತ್ತಿದೆ ಎಂದು ಕಾಲೇಜಿನ ಆಡಳಿತಾಧಿಕಾರಿ ಶ್ರೀ ವೈ ಯು ಸುಭಾಶ್ಚಂದ್ರ ತಿಳಿಸಿದ್ದಾರೆ.