ಜಿಎಂಐಟಿ : ಎಂಬಿಎ ವಿಭಾಗದಿಂದ ದಿಶಾ ಫೋರಂ ಉದ್ಘಾಟನಾ ಸಮಾರಂಭ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ದಿಶಾ ಫೋರಂ ಉತ್ತಮ ವೇದಿಕೆ: ಪ್ರೊ ಬಕ್ಕಪ್ಪ ಶೈಕ್ಷಣಿಕ ಶ್ರೇಷ್ಠತೆಯ ಜೊತೆಗೆ ಉತ್ತಮ ವರ್ತನೆ ಮೈಗೂಡಿಸಿಕೊಳ್ಳುವುದು ಅತ್ಯಗತ್ಯ: ನಾಗರಾಜ್ ಬಿ ವಿ
ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಂಬಿಎ ವಿಭಾಗದ ದಿಶಾ ಫೋರಂ ಉದ್ಘಾಟನಾ ಸಮಾರಂಭವನ್ನು ಇದೇ ದಿನಾಂಕ 23ನೇ ಬುಧವಾರದಂದು ವಿಭಾಗದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹರಿಹರದ
ಕಿರ್ಲೋಸ್ಕರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ನ ಅಕ್ಯಾಡೆಮಿಕ್ ಡೀನ್ ಡಾ ನಾಗರಾಜ್ ಬಿವಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಬೆಳವಣಿಗೆಯ ಜೊತೆಜೊತೆಗೆ ಉತ್ತಮ ವರ್ತನೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ತಮ್ಮ ಬುದ್ಧಿಮಟ್ಟವನ್ನು ಹೆಚ್ಚಿಸಿಕೊಳ್ಳಬೇಕೆಂದು ತಿಳಿಹೇಳಿದರು.
ಎಂಬಿಎ ವಿಭಾಗದ ನಿರ್ದೇಶಕರಾದ ಡಾ ಬಕ್ಕಪ್ಪ ಬಿ ಮಾತನಾಡಿ, ದಿಶಾ ಫೋರಂ ಒಂದು ಉತ್ತಮ ವೇದಿಕೆಯಾಗಿದ್ದು ಹಲವು ಚಟುವಟಿಕೆಗಳನ್ನು ನಡೆಸಲಾಗುವುದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಈ ಚಟುವಟಿಕೆಗಳು ಸಹಕಾರಿಯಾಗಲಿವೆ ಎಂದು ತಿಳಿಸಿದರು.
ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಮತ್ತು ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ ಡಾ ಸಂಜಯ್ ಪಾಂಡೆ ಮಾತನಾಡಿ, ಕಾಲೇಜಿನಲ್ಲಿ ಅತ್ಯುತ್ತಮ ಸೌಲಭ್ಯಗಳಿದ್ದು, ಅವುಗಳನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು ಮತ್ತು ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಇದೇ ವೇಳೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರಾದ ಡಾ ಮಂಜುನಾಥ್ ಬಿಆರ್, ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್, ಅಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.