ಜಿಎಂಐಟಿ ಇನ್ಫಾರ್ಮೇಶನ ಸೈನ್ಸ್ ವಿಭಾಗದಿಂದ ಮೂರು ದಿನಗಳ ಐಓಟಿ ಕಾರ್ಯಾಗಾರ
ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇನ್ಫಾರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗದಿಂದ ಮೂರು ದಿನಗಳ ಕಾರ್ಯಗಾರದ ಉದ್ಘಾಟನೆಯನ್ನು ವಿಭಾಗದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಾಗಾರವು ಇತ್ತೀಚಿನ ತಂತ್ರಜ್ಞಾನವಾದ “ಇಂಟರ್ನೆಟ್ ಆಫ್ ಥಿಂಗ್ಸ್” ಎಂಬ ವಿಷಯದ ಮೇಲೆ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ನೀಡುವುದಾಗಿದೆ ಎಂದು ವಿಭಾಗದ ಮುಖ್ಯಸ್ಥರಾದ ಡಾ ಬಿ ಎಸ್ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ ಬಿಎನ್ಎಂಐಟಿ ಕಾಲೇಜಿನ ಅಧ್ಯಾಪಕಿ ಯಾದ ಡಾ ಸುನಿತಾ ಆರ್,ಇಂದಿನ ಕೈಗಾರಿಕೆಗಳಲ್ಲಿ ಅತಿ ಹೆಚ್ಚು ಬೇಡಿಕೆ ಉಳ್ಳ ತಂತ್ರಜ್ಞಾನ ವಾಗಿದ್ದು, ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನವನ್ನು ಪಡೆಯುವುದಲ್ಲದೆ, ಪ್ರಾಜೆಕ್ಟ್ ತಯಾರಿಸುವ ಬುದ್ಧಿಶಕ್ತಿಯನ್ನು ಪಡೆಯಲಿದ್ದಾರೆ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿಯೂ ಮೂರು ದಿನಗಳ ಕಾಲ ವಿದ್ಯಾರ್ಥಿಗಳ ಜೊತೆಗೂಡಿ ಅವರನ್ನು ತಾಂತ್ರಿಕವಾಗಿ ಉತ್ತಮ ಪಡಿಸುವುದಾಗಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಮಾತನಾಡಿ, ಕೈಗಾರಿಕೆಗಳಿಗೆ ಪೂರಕವಾದ ಹಲವು ರೀತಿಯ ಚಟುವಟಿಕೆಗಳು ಕಾಲೇಜ್ ಆವರಣದಲ್ಲಿ ನಡೆಯುತ್ತಿದ್ದು, ಇದೊಂದು ಉತ್ತಮ ಬೆಳವಣಿಗೆ ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಶ್ರೀ ವೈ ಯು ಸುಭಾಶ್ಚಂದ್ರ, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್, ಕಾರ್ಯಾಗಾರದ ಸಂಯೋಜಕರು ಗಳಾದ ಡಾ ನೀಲಾಂಬಿಕೆ ಎಸ್ ಮತ್ತು ಶ್ರೀ ಅಮಿತ್ ಶೇಖರ್ ಸಿ, ಅಧ್ಯಾಪಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.