ಜಿಎಂಐಟಿ: ಎಂಬಿಎ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು. ಎಂಬಿಎ ಸೇರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಕಾಲೇಜಿನ ಆಡಳಿತ ಮಂಡಳಿಯಿ0ದ ಲ್ಯಾಪ್ಟಾಪ್ ವಿತರಿಸಲಾಗುತ್ತಿದ್ದು ಈ ಹಿಂದಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಲಾಗಿದೆ.

ಲ್ಯಾಪ್ಟಾಪ್ ವಿತರಣಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್ ಮಾತನಾಡಿ, ಪ್ರವೇಶದ ಪ್ರಾರಂಭದಲ್ಲಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದಂತೆ ಲ್ಯಾಪ್ಟಾಪ್ ವಿತರಣೆಯನ್ನು ಮಾಡಲಾಗಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡಿಸಿಕೊಳ್ಳಬೇಕೆಂದು ಕರೆ ಕೊಟ್ಟರು.

ಎಂಬಿಎ ವಿಭಾಗದ ನಿರ್ದೇಶಕರಾದ ಡಾ. ಬಕ್ಕಪ್ಪ ಮಾತನಾಡಿ, ನಿರ್ವಹಣಾ ಶಿಕ್ಷಣದಲ್ಲಿ ತಾಂತ್ರಿಕತೆ, ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ತಾಂತ್ರಿಕತೆಯನ್ನು ನಿರ್ವಹಣ ಶಿಕ್ಷಣದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಹೆಚ್ಚಿನ ಜ್ಞಾನವನ್ನು ಸಂಪಾದಿಸಬೇಕೆ0ದು ಇದೇ ವೇಳೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಆಡಳಿತಾಧಿಕಾರಿ ವೈ. ಯು. ಸುಭಾಶ್ಚಂದ್ರ, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ್ ಬಿ.ಆರ್, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ.ಆರ್., ವಿಭಾಗದ ಪ್ರಾಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!