ಜಿಎಂಐಟಿ: ಲಂಡನ್ ಮೂಲದ ಇವೈ ಗ್ಲೋಬಲ್ ಲಿ. ಕಂಪನಿಗೆ ಜಿಎಂಐಟಿಯ 32 ವಿದ್ಯಾರ್ಥಿಗಳು ಆಯ್ಕೆ.
ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ನಡೆದ ಲಂಡನ್ ಮೂಲದ ಇವೈ ಗ್ಲೋಬಲ್ ಲಿ. ಕಂಪನಿ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 32 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಸಿಟಿ ಅಕ್ಯಾಡಮಿ ಸಹಯೋಗದಲ್ಲಿ ಕಂಪನಿಯು ಆನ್ಲೈನ್ ಮೂಲಕ ಸಂದರ್ಶನ ಪ್ರಕ್ರಿಯೆ ನಡೆಸಿ ವಿದ್ಯಾರ್ಥಿಗಳನ್ನು ಅಸೋಸಿಯೇಟ್ ಸಾಫ್ಟ್ವೇರ್ ಎಂಜಿನಿಯರ್ ಹುದ್ದೆಗೆ ಆಯ್ಕೆ ಮಾಡಿಕೊಂಡಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಂಪನಿಯು ವಾರ್ಷಿಕ 4.5 ಲಕ್ಷ ಪ್ಯಾಕೇಜ್ ಘೋಷಣೆ ಮಾಡಿದ್ದು, ಇತರ ಪ್ರಯೋಜನಗಳನ್ನು ನೀಡಲಿದೆ.
ಇದುವರೆಗೂ 441 ವಿದ್ಯಾರ್ಥಿಗಳು ವಿವಿಧ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿ ಕಾಲೇಜಿಗೆ ಮತ್ತು ತಮ್ಮ ಪೋಷಕರಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಯ ಸದಸ್ಯರು ಆದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಇನ್ನೂ ಅನೇಕ ಕಂಪನಿಗಳು ಬರಲಿದ್ದು, ವಿದ್ಯಾರ್ಥಿಗಳನ್ನು ಆ ನಿಟ್ಟಿನಲ್ಲಿ ತಯಾರುಮಾಡುವ ಜವಾಬ್ದಾರಿ ಇದೆ ಎಂದು ಇದೇ ವೇಳೆ ತಿಳಿಸಿದರು.
ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಆದ ಶ್ರೀ ಜಿಎಂ ಲಿಂಗರಾಜು, ಆಡಳಿತಾಧಿಕಾರಿ ಶ್ರೀ ವೈ ಯು ಸುಭಾಷ್ ಚಂದ್ರ, ವಿವಿಧ ವಿಭಾಗದ ಮುಖ್ಯಸ್ಥರುಗಳು ಮತ್ತು ಅಧ್ಯಾಪಕ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.