ಜಿಎಂಐಟಿ ಎಂಬಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ದಿನಾಂಕ: 16 ನೇ ತಾರೀಖು ಶನಿವಾರದಂದು ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭವನ್ನು ಎಂಬಿಎ ಫೋರಂ ದಿಶಾ-2021 ಅಡಿಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಅಂತಿಮ ವರ್ಷದ ವಿದ್ಯಾರ್ಥಿಗಳು ತಮಗೆ ಇಷ್ಟವಾದ ಉಡುಗೆ ತೊಡುಗೆಯನ್ನು ಹುಟ್ಟು ಸಮಾರಂಭದ ಮೆರಗನ್ನು ಇನ್ನಷ್ಟು ಹೆಚ್ಚಿಸಿದ್ದು ವಿಶೇಷವಾಗಿತ್ತು.

ಪ್ರತಿವರ್ಷದಂತೆ ಈ ವರ್ಷವೂ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.

ಎಂಬಿಎ ವಿಭಾಗದ ಮುಖ್ಯ ಸಲಹೆಗಾರರಾದ ಡಾ. ಬಿ ಬಕ್ಕಪ್ಪ ಮಾತನಾಡಿ, ಸ್ನಾತಕೋತ್ತರ ಪದವಿಯನಂತರ ವಿದ್ಯಾರ್ಥಿಗಳು ಈ ದೇಶದ ಆಸ್ತಿ ಯಾಗಲಿದ್ದು, ದೇಶದ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದು ತಿಳಿಸಿದರು. ಕಾಲೇಜಿನ ತರಬೇತಿ ಮತ್ತು ಉದ್ಯೋಗ ಅಧಿಕಾರಿಯಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ರವರು ಮಾತನಾಡಿ, ಹಲವು ವಿದ್ಯಾರ್ಥಿಗಳಿಗೆ ಈಗಾಗಲೇ ಉದ್ಯೋಗ ದೊರೆತಿದ್ದು, ಪ್ರತಿಷ್ಠಿತ ಕಂಪನಿಗಳಾದ ಐಸಿಐಸಿಐ ಬ್ಯಾಂಕ್, ಡಿ ಮಾರ್ಟ್, ಪಿನ್ ಕ್ಲಿಕ್ ಪ್ರಾಪರ್ಟಿ ಮ್ಯಾನೇಜ್ಮೆಂಟ್, ಬೈಜೂಸ್, ವೇದಾಂತು, ಎಜುಮ್ಯಾಟಿಕ್ಸ್ ಮುಂತಾದ ಹಲವು ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ದೊರೆತಿದ್ದು, ಮುಂದಿನ ದಿನಗಳಲ್ಲಿ ತಮ್ಮ ಕಿರಿಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಬೇಕು ಎಂದು ತಿಳಿಸಿದರು. ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ್ ಬಿ ಆರ್ ಹೊರಹೋಗುವ ವಿದ್ಯಾರ್ಥಿಗಳಿಗೆ ಶುಭಕೋರಿದರು ಮತ್ತು ಮೊದಲನೇ ವರ್ಷದ ವಿದ್ಯಾರ್ಥಿಗಳಿಗೆ ಅವರ ಭವಿಷ್ಯ ಮತ್ತು ವೃತ್ತಿ ಜೀವನದ ಬಗ್ಗೆ ಮಾರ್ಗದರ್ಶನ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ ವಿಜಯಕುಮಾರ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಇದೊಂದು ಮಹತ್ತರ ಘಟ್ಟ, ಸ್ನಾತಕೋತ್ತರ ಪದವಿಯನಂತರ ನಿಮ್ಮಗಳ ಜವಾಬ್ದಾರಿ ಹೆಚ್ಚಾಗಿದ್ದು, ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಿ, ಹೆತ್ತ ತಂದೆ ತಾಯಿಗೆ ಕೀರ್ತಿವಂತವರಾಗಿ, ಈ ಸಂಸ್ಥೆಯ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕೆಂದು ಕಿವಿಮಾತು ಹೇಳಿದರು.

ನಂತರ ನಡೆದ ಸಮಾರಂಭದಲ್ಲಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕಾರ್ಯಕ್ರಮದಲ್ಲಿ ಸ್ವಾಗತವನ್ನು ಕುಮಾರಿ ಯಶಸ್ವಿನಿ ಸಿ ಎಂ, ಪ್ರಾರ್ಥನೆಯನ್ನು ಕುಮಾರಿ ರಮ್ಯಾ ಜಿ ಎಸ್ ಮತ್ತು ತಂಡದವರು, ಮುಕ್ತಾಯ ಭಾಷಣವನ್ನು ಕುಮಾರಿ ಅಖಿಲ ಎಸ್ಎಂ, ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಮಧು ಕೆ ಮತ್ತು ಕುಮಾರಿ ಸೇವಂತಿ ಶೆಟ್ಟಿ ನೆರವೇರಿಸಿದರು.

 

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ವೈ ವಿಜಯಕುಮಾರ್, ಎಂಬಿಎ ವಿಭಾಗದ ಸಲಹೆಗಾರರಾದ ಡಾ. ಬಿ ಬಕ್ಕಪ್ಪ, ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ್ ಬಿ ಆರ್, ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಶ್ರೀ. ತೇಜಸ್ವಿ ಕಟ್ಟಿಮನಿ ಟಿ ಆರ್, ದಿಶಾ ಫೋರಂ ಆಯೋಜಕರಾದ ಡಾ. ಗುರುರಾಜ್ ಪಾಠಕ್, ವಿಭಾಗದ ಅಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!