ಜಿಎಂಐಟಿ: ಎಂಬಿಎ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆ ಗಳ ಬಗ್ಗೆ ನಾಲ್ಕು ದಿನದ ತರಬೇತಿ ಕಾರ್ಯಾಗಾರ
ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಲ್ಲಿ ದಿನಾಂಕ 24ನೇ ಬುಧವಾರದಂದು ಬೆಳಗ್ಗೆ ಒಂಬತ್ತು ಗಂಟೆಗೆ ಎಂಬಿಎ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಉದ್ಯೋಗ ಕೌಶಲ್ಯತೆ ಗಳ ಬಗ್ಗೆ ನಾಲ್ಕು ದಿನದ ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಕೊನೆಯ ವರ್ಷದ ಎಂಬಿಎ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಈ ನಾಲ್ಕು ದಿನದ ಕಾರ್ಯಾಗಾರವನ್ನು ರುಬಿಕಾನ್ ಸ್ಕಿಲ್ ದೆವಲಪ್ಮೆಂಟ್ ಸಂಸ್ಥೆಯು ಜಿಎಂಐಟಿ ಸಹಯೋಗದಲ್ಲಿ ನಡೆಸುತ್ತಿದ್ದು , ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ರೀತಿಯ ಕೈಗಾರಿಕಾ ಕೌಶಲ್ಯ ತೆಗಳು ಮತ್ತು ಉತ್ತಮ ನಡವಳಿಕೆಗಳ ಬಗ್ಗೆ ತರಬೇತಿಯನ್ನು ನೀಡಲಾಗುವುದು ಎಂದು ಕಾಲೇಜಿನ ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಭಾಷಣವನ್ನು ಮಾಡಿದ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್, ವಿದ್ಯಾರ್ಥಿಗಳಿಗೆ ಅದರಲ್ಲೂ ಎಂಬಿಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ನಿರ್ವಹಣಾ ಕೌಶಲ್ಯತೆಯನ್ನು ಬೆಳೆಸಿಕೊಳ್ಳಬೇಕಾಗಿದೆ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತೀಕ್ಷ್ಣವಾಗಿ ಪ್ರತಿಕ್ರಿಯಿಸುವ ಮೂಲಕ ತಮ್ಮ ಪ್ರತಿಭೆಯನ್ನು ಹೊರ ಹಾಕಬೇಕಾಗಿದೆ ಎಂದು ತಿಳಿಸಿದರು.
ಎಂಬಿಎ ವಿಭಾಗದ ಸಲಹೆಗಾರರಾದ ಡಾ ಬಿ ಬಕ್ಕಪ್ಪ ರವರು ಮಾತನಾಡಿ, ಈ ಕಾರ್ಯಗಾರದ ಉಪಯೋಗವನ್ನು ಪಡೆದು ಮುಂದಿನ ದಿನಗಳಲ್ಲಿ ಬರುವ ಕಂಪನಿಗಳ ಸಂದರ್ಶನ ಪ್ರಕ್ರಿಯೆಯನ್ನು ಆತ್ಮವಿಶ್ವಾಸದಿಂದ ಎದುರಿಸಬೇಕಾಗಿದೆ ಎಂದು ತಿಳಿಸಿದರು.
ವಿಭಾಗದ ಮುಖ್ಯಸ್ಥರಾದ ಡಾ ಮಂಜುನಾಥ್ ಬಿ ಆರ್ ಮಾತನಾಡಿ, ಈ ರೀತಿಯ ಹಲವಾರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಮತ್ತು ನಿಮ್ಮ ಕಿರಿಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರು ಆಗಬೇಕೆಂದು ಕೋರಿದರು.
ರುಬಿಕಾನ್ ಸಂಸ್ಥೆಯ ತರಬೇತುದಾರರಾದ ಶ್ರೀ ರವಿಶಂಕರ್ ಜಿ ವಿದ್ಯಾರ್ಥಿಗಳಿಗೆ ಶುಭಕೋರಿದರು.
ಕಾರ್ಯಕ್ರಮದಲ್ಲಿ ವಿಭಾಗದ ಎಲ್ಲಾ ಅಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.