ಜಿಎಂಐಟಿ:ಒಂದು ದಿನದ ಕಾರ್ಯಾಗಾರ – ಬಯೋಟೆಕ್ನಾಲಜಿ ಪದವಿ ನಂತರದ ವಿವಿಧ ಉದ್ಯೋಗವಕಾಶಗಳು

ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ಬಯೋಟೆಕ್ನಾಲಜಿ ವಿಭಾಗದಲ್ಲಿ ಇತ್ತೀಚಿಗೆ ನಡೆದ ಒಂದು ದಿನದ ಕಾರ್ಯಾಗಾರ
ಬಯೋಟೆಕ್ನಾಲಜಿ ಪದವಿ ನಂತರದ ಉದ್ಯೋಗವಕಾಶಗಳು ಉದ್ಘಾಟನಾ ಸಮಾರಂಭವನ್ನು ವಿಭಾಗದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಾಗಾರವು ಮೂರನೇ ಸೆಮಿಸ್ಟರ್ ಓದುತ್ತಿರುವ ಎಂಜಿನಿಯರಿಂಗ್ ಬಯೋಟೆಕ್ನಾಲಜಿ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿತ್ತು. ಈ ಕಾರ್ಯಾಗಾರವನ್ನು ದಾವಣಗೆರೆಯ ಕಾಪರ್ ಏಜ್ ಸ್ಪರ್ಧಾತ್ಮಕ ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಪರ್ ಏಜ್ ಸಂಸ್ಥೆಯ ನಿರ್ದೇಶಕರಾದ ಶರತ್ ಜಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಆಸಕ್ತಿ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗಿದ್ದು, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿಯನ್ನು ಮೂಡಿಸಬೇಕಾಗಿದೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸರಿಯಾದ ತರಬೇತಿ ದೊರೆತದ್ದೇ ಆದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸುವ ಮನೋಸ್ಥೈರ್ಯ ಬರುವುದು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಮಾತನಾಡಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತಾಂತ್ರಿಕ ಬುದ್ಧಿ ಮಟ್ಟ ಮತ್ತು ಆಲೋಚನೆ ಉಳಿದ ವಿದ್ಯಾರ್ಥಿಗಳಿಗಿಂತ ಹೆಚ್ಚಾಗಿಯೇ ಇರುತ್ತದೆ, ಇದರ ಜೊತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆ ಗೊಂಡು ಉನ್ನತ ಹುದ್ದೆಯಲ್ಲಿ ಆಶ್ಚರ್ಯಕರ ಫಲಿತಾಂಶವನ್ನು ಕೊಡಬಹುದಾಗಿದೆ ಎಂದು ತಿಳಿಸಿದರು.

ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ಮಾತನಾಡಿ, ಬಯೋಟೆಕ್ನಾಲಜಿ ವಿದ್ಯಾರ್ಥಿಗಳಿಗೆ ಉನ್ನತ ಕೈಗಾರಿಕೆಗಳಲ್ಲಿ ಮತ್ತು ಸರ್ಕಾರದ ವಲಯಗಳಲ್ಲಿ ಹಲವು ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ವಿಭಾಗದ ಮುಖ್ಯಸ್ಥರಾದ ಡಾ ಪ್ರಕಾಶ್ ಕೆ ಕೆ ವಿದ್ಯಾರ್ಥಿಗಳಿಗೆ ಅವರುಗಳ ಮುಂದಿನ ಭವಿಷ್ಯದ ಗಂಭೀರತೆಯ ಬಗ್ಗೆ ಮನದಟ್ಟು ಮಾಡಿದರು ಮತ್ತು ಕಾರ್ಯಾಗಾರಕ್ಕೆ ಶುಭಕೋರಿದರು.

ಕಾರ್ಯಕ್ರಮದಲ್ಲಿ ಕಾರ್ಯಗಾರದ ಸಂಯೋಜಕರು ಗಳಾದ ದೀಪ್ತಿ ಪಲ್ಯದ, ಗಣೇಶ್ ಜಿ ಟಿ, ವಿಭಾಗದ ಎಲ್ಲಾ ಅಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *

error: Content is protected !!