ಜಿಎಂಐಟಿ: ಕಾರ್ಯಾಗಾರದ ಉದ್ಘಾಟನೆ.
ಜಿಎಂಐಟಿ: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅತ್ಯವಶ್ಯಕ ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಐಎಂಎಲ್ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಕಾರ್ಯಾಗಾರ ” ಪಿಸಿಬಿ ಅಸೆಂಬಲಿಂಗ್” ಉದ್ಘಾಟನೆಯನ್ನು ವಿಭಾಗದ ಸೆಮಿನಾರ್ ಹಾಲ್ ನಲ್ಲಿ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ವಿದ್ಯಾರ್ಥಿಗಳ ಸಮ್ಮುಖದಲ್ಲಿ ನೆರವೇರಿಸಿದರು.
ಈ ಎರಡು ದಿನದ ಕಾರ್ಯಾಗಾರವನ್ನು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ವಿಭಾಗದ ತಾಂತ್ರಿಕ ಸಲಹೆಗಾರರಾದ ಶ್ರೀನಿವಾಸ್ ಟಿ ಮತ್ತು ರಾಜಶೇಖರ್ ಎಲಿಗಾರ್ ನಡೆಸಿಕೊಡಲಿದ್ದಾರೆ. ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಜ್ಞಾನವನ್ನು ಕೊಡುವಂತಹ ಕಾರ್ಯಕ್ರಮವಾಗಿದ್ದು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಇಂದಿನ ಕೈಗಾರಿಕಾ ಬೇಡಿಕೆಯಂತೆ ನಾವುಗಳು ತಯಾರಾಗಬೇಕಿದ್ದು, ಆ ನಿಟ್ಟಿನಲ್ಲಿ ಈ ರೀತಿಯ ಪ್ರಾಯೋಗಿಕ ಕಾರ್ಯಾಗಾರಗಳು ನಮ್ಮ ಕೌಶಲ್ಯ ಜ್ಞಾನವನ್ನು ಹೆಚ್ಚಿಸಲಿವೆ ಎಂದು ಪ್ರಾಂಶುಪಾಲರಾದ ಡಾ ವೈ ವಿಜಯ್ ಕುಮಾರ್ ತಿಳಿಸಿದರು. ಪಠ್ಯ ಜ್ಞಾನದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯವಶ್ಯಕ ಎಂದು ಇದೇ ವೇಳೆ ಕಿವಿಮಾತು ಹೇಳಿದರು.
ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥರಾದ ಡಾ ಪ್ರವೀಣ್ ಜೆ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಎಐಎಂಎಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಶ್ರೀ ಕೀರ್ತಿಪ್ರಸಾದ್ ಕಾರ್ಯಗಾರದ ಪ್ರಾಮುಖ್ಯತೆಯ ಬಗ್ಗೆ ತಿಳಿ ಹೇಳಿದರು.
ಕುಮಾರಿ ಪೂರ್ವಿಕ ಪ್ರಾರ್ಥನೆಯನ್ನು, ಕುಮಾರಿ ಕೃತಿಕಾ ಸ್ವಾಗತ ಭಾಷಣವನ್ನು ಮತ್ತು ಕುಮಾರಿ ನಿತ್ಯ ಎಂಎಸ್ ವಂದನಾರ್ಪಣೆಯನ್ನು ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಶ್ರೀ ಸುಭಾಶ್ಚಂದ್ರ ವೈ ಯು, ವಿಭಾಗದ ಅಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡು ಯಶಸ್ವಿಗೊಳಿಸಿದರು.