ಜಿಎಂಐಟಿ: ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಉದ್ಯೋಗ ಕೌಶಲ್ಯತೆಯನ್ನು ಹೆಚ್ಚಿಸಿಕೊಳ್ಳಿ

ದಾವಣಗೆರೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳು ಶೈಕ್ಷಣಿಕ ಪಠ್ಯಕ್ರಮದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಉದ್ಯೋಗ ಕೌಶಲ್ಯತೆಯನ್ನು ಹೆಚ್ಚಿಸಿಕೊಳ್ಳಿ ಎಂದು ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ತಿಳಿಸಿದರು. ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಅಂಡ್ ಮಷೀನ್ ಲರ್ನಿಂಗ್ ವಿಭಾಗದ ಫೋರಂ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿಭಾಗದ ನೂತನ ಫೋರಂ ಹೆಸರು ಮತ್ತು ಲಾಂಛನವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಫೋರಂ “ಆಲ್ಟಿಟ್ಯುಡ್” ಉದ್ಘಾಟನಾ ಸಮಾರಂಭವನ್ನು ಜಿಎಂಐಟಿ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ದಿನಾಂಕ 20ನೇ ಶನಿವಾರದಂದು ಬೆಳಗ್ಗೆ 11.30 ಕ್ಕೆ ಹಮ್ಮಿಕೊಳ್ಳಲಾಗಿತ್ತು. ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳು ತಮಗೆ ಇಷ್ಟವಾದ ಉಡುಗೆಗಳನ್ನು ತೊಟ್ಟು ಸಮಾರಂಭದ ಕಳೆಯನ್ನು ಹೆಚ್ಚಿಸಿದ್ದರು.
ಮುಖ್ಯಅತಿಥಿಗಳಾಗಿ ಕಾಲೇಜಿನ ಹಳೆಯ ವಿದ್ಯಾರ್ಥಿ ದೀಕ್ಷಿತ್ ಆರ್ ಜೈನ್ ಮಾತನಾಡಿ, ಬರೀ ಪಠ್ಯಕ್ರಮಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಕೌಶಲ್ಯತೆಯನ್ನು ಮತ್ತು ನೈಪುಣ್ಯತೆಯನ್ನು ಹೊಂದಬೇಕಾಗಿದೆ ಎಂದು ತಿಳಿಸಿದರು.
ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಮಾತನಾಡಿ, ಕಾಲೇಜಿನಲ್ಲಿ ನಾಲಕ್ಕು ಆಯ್ಕೆ ಗಳಿದ್ದು, ಅವುಗಳೆಂದರೆ ಉದ್ಯೋಗ, ಉದ್ಯಮಶೀಲತೆ, ಉನ್ನತ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆ. ವಿದ್ಯಾರ್ಥಿಗಳು ಅವರುಗಳ ಆಸಕ್ತಿಯ ಅನುಸಾರವಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದಾಗಿದ್ದು, ತರಬೇತಿಯನ್ನು ಸಹ ನೀಡಲಿದ್ದೇವೆ ಎಂದು ತಿಳಿಸಿದರು.
ವಿಭಾಗದ ಮುಖ್ಯಸ್ಥರಾದ ಶ್ರೀ ಕೀರ್ತಿಪ್ರಸಾದ್ ಮಾತನಾಡಿ, ಆಲ್ಟಿಟ್ಯುಡ್ ಎಂದರೆ ಎತ್ತರ, ಆಲ್ಟಿಟ್ಯುಡ್ ಫೋರಂ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಬುದ್ಧಿಮಟ್ಟವನ್ನು ಹೆಚ್ಚಿಸಿಕೊಳ್ಳುವುದರ ಮೂಲಕ ಉದ್ಯೋಗದಲ್ಲಿ ಮತ್ತು ಭವಿಷ್ಯದಲ್ಲಿ ಎತ್ತರದ ಸ್ಥಾನಕ್ಕೆ ಹೋಗಬೇಕೆಂದು ಕಿವಿಮಾತು ಹೇಳಿದರು.
ನಂತರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿಕೊಟ್ಟರು.
ಫೋರಂನ ರೂಪುರೇಷಗಳನ್ನು ವಿಭಾಗದ ಪ್ರಾಧ್ಯಾಪಕಿಯಾದ ಶ್ರೀಮತಿ ಕಾವ್ಯ ಸಿ, ವಂದನಾರ್ಪಣೆಯನ್ನು ಶ್ರೀಮತಿ ಆಶಾ ಕೆ ನೆರವೇರಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ವಿಭಾಗದ ಪ್ರಾಧ್ಯಾಪಕರುಗಳು, ವಿದ್ಯಾರ್ಥಿಗಳು, ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಪಾಲ್ಗೊಂಡು ಸಮಾರಂಭದ ಮೆರುಗನ್ನು ಹೆಚ್ಚಿಸಿದರು.