ಜಿಎಂಐಟಿ ಪಾಲಿಟೆಕ್ನಿಕ್: ಲಸಿಕಾ ಅಭಿಯಾನ ಉದ್ಘಾಟನಾ ಕಾರ್ಯಕ್ರಮ

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂಐಟಿ ಪಾಲಿಟೆಕ್ನಿಕ್ ಕಾಲೇಜಿನಿಂದ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ದಿನಾಂಕ 12ನೇ ಬುಧವಾರದಂದು ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. 15 ರಿಂದ 18 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದಂತೆ ಲಸಿಕೆಯನ್ನು ನೀಡಲಾಯಿತು. ಡಿಪ್ಲೋಮೋ ಓದುತ್ತಿರುವ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು. ಸುಮಾರು 200 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಲಸಿಕೆಯನ್ನು ಪಡೆದರು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಶ್ರೀಧರ್ ಬಿ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮೆಡಿಕಲ್ ಆಫೀಸರ್ ಡಾ.ನವ್ಯ ಮತ್ತು ಕಾಲೇಜಿನ ಆಡಳಿತಾಧಿಕಾರಿ ಶ್ರೀ ವೈ ಯು ಸುಭಾಶ್ಚಂದ್ರ ನೆರವೇರಿಸಿದರು.

ಸ್ವಾಮಿ ವಿವೇಕಾನಂದರವರ 159ನೇ ಜನ್ಮದಿನದ ಈ ದಿನವು ಅತ್ಯಂತ ಶ್ರೇಷ್ಠ ಮತ್ತು ಈ ದಿನ ಈ ಕಾರ್ಯಕ್ರಮವು ಆಯೋಜನೆ ಗೊಳ್ಳುತ್ತಿರುವುದು ತುಂಬಾ ಸಂತೋಷದಾಯಕ ವಿಷಯ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದರು.

ನಂತರ ಮಾತನಾಡಿದ ಜಿಎಂ ಫಾರ್ಮಸಿಟಿಕಲ್ ಸೈನ್ಸ್ ಅಂಡ್ ರಿಸರ್ಚ್ ಕಾಲೇಜಿನ ಪ್ರಾಂಶುಪಾಲರಾದ ಡಾ ಗಿರೀಶ್ ಬೋಳ ಕಟ್ಟಿ ಲಸಿಕೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಎರಡು ತಂಡಗಳಲ್ಲಿ ಭಾಗವಹಿಸಿ ಅಚ್ಚುಕಟ್ಟಾದ ನಿರ್ವಹಣೆಯನ್ನು ಮಾಡಿದ್ದರು. ಎಲ್ಲಿಯೂ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರುಗಳ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಜಿಎಂಐಟಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂ ಬಿ, ಜಿ ಎಂ ಎಚ್ ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಡಾ ವೆಂಕಟ ರಾಯುಡು ವಿ, ಸಹ ಆಡಳಿತಾಧಿಕಾರಿಗಳಾದ ಶ್ರೀ ಶಿವಕುಮಾರ್ ಜಿ ಜೆ, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಹಾಗೂ ಅಧ್ಯಾಪಕ ವರ್ಗದವರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!