ಜಿಎಂಐಟಿ:ಇನ್ಫಾರ್ಮೇಷನ್ ಸೈನ್ಸ್ ವಿದ್ಯಾರ್ಥಿಗಳಿಗೆ “ಪೈತಾನ್ ಪ್ರೋಗ್ರಾಮಿಂಗ್” ಕಾರ್ಯಗಾರ

ದಾವಣಗೆರೆ : ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇನ್ಫಾರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಿಂದ ಎರಡನೇ ವರ್ಷದ ವಿದ್ಯಾರ್ಥಿಗಳಿಗೆ “ಪೈತಾನ್ ಪ್ರೋಗ್ರಾಮಿಂಗ್” ಎರಡು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಗಾರವನ್ನು ಪುಣೆ ಮೂಲದ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಲಾಗಿತ್ತು. ಎರಡು ದಿನದ ಕಾರ್ಯಾಗಾರವನ್ನು ಸಂಪನ್ಮೂಲ ವ್ಯಕ್ತಿಯಾಗಿ ವೈಷ್ಣವಿ ನಡೆಸಿಕೊಡಲಿದ್ದಾರೆ ಎಂದು ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹತ್ತು ವರ್ಷಗಳ ಕೈಗಾರಿಕಾ ಅನುಭವವನ್ನು ಹೊಂದಿರುವ ವೈಷ್ಣವಿ ತಮ್ಮ ಜ್ಞಾನ ಭಂಡಾರದ ಮೂಲಕ ವಿದ್ಯಾರ್ಥಿಗಳನ್ನು ಕೈಗಾರಿಕೆಗಳಿಗೆ ತಯಾರು ಮಾಡುವ ಜವಾಬ್ದಾರಿಯನ್ನು ಹೊಂದಿದ್ದಾರೆ ಮತ್ತು ಆ ನಿಟ್ಟಿನಲ್ಲಿ ಸಫಲ ರಾಗಲಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದರು.
ಕೈಗಾರಿಕೆಗಳಲ್ಲಿ ಅತಿ ಹೆಚ್ಚು ಬಳಸಲ್ಪಡುವ ಕೋಡಿಂಗ್ ಲಾಂಗ್ವೇಜ್ ನಲ್ಲಿ ಪೈತಾನ್ ಪ್ರೋಗ್ರಾಮಿಂಗ್ ಕೂಡ ಒಂದಾಗಿದ್ದು, ವಿದ್ಯಾರ್ಥಿಗಳು ಇದರ ಲಾಭವನ್ನು ಪಡೆದು ಮುಂದಿನ ದಿನಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂದು ತಿಳಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್, ಅಧ್ಯಾಪಕರು ಗಳಾದ ಇಮ್ರಾನ್ ಖಾನ್, ಡಾ ನೀಲಾಂಬಿಕೆ ಎಸ್, ವಿಶ್ವನಾಥ್, ಫಿರೋಜ್ ಖಾನ್, ಸೌಮ್ಯ ಇತರರು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಜೀವಿತ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.
garudavoice21@gmail.com 9740365719