ಜಿಎಂಎಸ್ ಕಾಲೇಜ್ : ವ್ಯಕ್ತಿತ್ವ ಮತ್ತು ಇತರ ಕೌಶಲ್ಯತೆ ಗಳ ಬಗ್ಗೆ ತಿಳಿಹೇಳಿ ವಿದ್ಯಾರ್ಥಿಗಳನ್ನು ಅಭಿವೃದ್ಧಿ ಪಡಿಸುವುದಾಗಿದೆ – ಪ್ರಾಂಶುಪಾಲ ಪ್ರೊ. ಶ್ವೇತಾ ಮರಿಗೌಡರ್
ದಾವಣಗೆರೆ : ನಗರದ ಪ್ರತಿಷ್ಠಿತ ಜಿಎಂಎಸ್ ಅಕ್ಯಾಡೆಮಿ ಫಸ್ಟ್ ಗ್ರೇಡ್ ಡಿಗ್ರಿ ಕಾಲೇಜ್ ನಲ್ಲಿ ನಾಲ್ಕು ದಿನದ ಉದ್ಯೋಗ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ತರಬೇತಿ ಕಾರ್ಯಕ್ರಮವನ್ನು ಹೆಸರಾಂತ ತರಬೇತಿ ಸಂಸ್ಥೆಯಾದ “ರುಬಿಕಾನ್ ಸ್ಕಿಲ್ ಡೆವಲಪ್ಮೆಂಟ್” ನ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬಿಎಸ್ಸಿ, ಬಿಕಾಂ, ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳನ್ನು ಕೈಗಾರಿಕೆಗಳ ಅವಶ್ಯಕತೆಗಳಿಗೆ ಅನುಗುಣವಾಗಿ ತಯಾರಿ ಮಾಡುವುದಾಗಿದ್ದು, ಕೈಗಾರಿಕಾ ಕೌಶಲ್ಯತೆ, ಬುದ್ಧಿ ಮಟ್ಟ, ಸಂದರ್ಶನ ಕೌಶಲ್ಯ, ನಡವಳಿಕೆ, ವ್ಯಕ್ತಿತ್ವ ಮತ್ತು ಇತರ ಕೌಶಲ್ಯತೆ ಗಳ ಬಗ್ಗೆ ತಿಳಿಹೇಳಿ ವಿದ್ಯಾರ್ಥಿಗಳನ್ನು ಅದರ ಕಡೆ ಅಭಿವೃದ್ಧಿ ಪಡಿಸುವುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶ್ವೇತಾ ಮರಿಗೌಡರ್ ತಿಳಿಸಿದರು.
ವಿದ್ಯಾರ್ಥಿಗಳಿಗೆ ಅನೇಕ ಕಂಪನಿಗಳ ಅವಕಾಶಗಳಿದ್ದು ಅವುಗಳ ಸಂದರ್ಶನವನ್ನು ಆತ್ಮವಿಶ್ವಾಸದಿಂದ ಎದುರಿಸಬೇಕಾದರೆ ಉದ್ಯೋಗ ಕೌಶಲ್ಯಗಳ ಬಗ್ಗೆ ತಿಳಿಯುವುದು ತುಂಬಾ ಮುಖ್ಯ. ಮುಂದಿನ ದಿನಗಳಲ್ಲಿ ಅನೇಕ ಕಂಪನಿಗಳು ಸಂದರ್ಶನವನ್ನು ನಡೆಸಲಿದ್ದು, ವಿದ್ಯಾರ್ಥಿಗಳು ಆ ನಿಟ್ಟಿನಲ್ಲಿ ತಯಾರಿಯನ್ನು ಮಾಡಿಕೊಳ್ಳಬೇಕಾಗಿದೆ ಎಂದು ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದರು.
ಅಂತಿಮ ವರ್ಷದ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಶ್ರೀ ವೈ ಯು ಸುಭಾಶ್ಚಂದ್ರ, ಸಹಾಯಕ ಆಡಳಿತಾಧಿಕಾರಿ ಶ್ರೀ ಶಿವಕುಮಾರ್, ಜಿಎಂಎಸ್ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಶ್ರೀ ಶಾಂತಕುಮಾರ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಗಳು ಪಾಲ್ಗೊಂಡಿದ್ದರು.