ಜಿ ಎಂ ಎಸ್ ಕಾಲೇಜ್: ಉದ್ಯೋಗ ತರಬೇತಿ ಮುಕ್ತಾಯ ಸಮಾರಂಭ,

ದಾವಣಗೆರೆ: ನಗರದ ಪ್ರತಿಷ್ಠಿತ ಜಿ ಎಂ ಎಸ್ ಅಕ್ಯಾಡಮಿ ಫಸ್ಟ್ ಗ್ರೇಡ್ ಡಿಗ್ರಿ ಕಾಲೇಜ್ ನಲ್ಲಿ ನಾಲ್ಕು ದಿನದ ಉದ್ಯೋಗ ತರಬೇತಿ ಮುಕ್ತಾಯ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಪುಣೆ ಮೂಲದ ರುಬಿಕಾನ್ ಸ್ಕಿಲ್ ದೆವಲಪ್ಮೆಂಟ್ ಸಂಸ್ಥೆಯ ನುರಿತ ತರಬೇತಿದಾರರು ಈ ನಾಲ್ಕು ದಿನದ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದ ಪ್ರಾಂಶುಪಾಲರಾದ ಪ್ರೊ. ಶ್ವೇತಾ ಮರಿಗೌಡರ್, ಮುಂದಿನ ದಿನಗಳಲ್ಲಿ ಅನೇಕ ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳು ನಡೆಯಲಿದ್ದು, ವಿದ್ಯಾರ್ಥಿಗಳ ಬೆಳವಣಿಗೆಗೆ ಸಹಕರಿಸಲಿದ್ದಾವೆ ಎಂದು ತಿಳಿಸಿದರು.

ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಕೈಗಾರಿಕೆಗಳಲ್ಲಿ ಅನೇಕ ಉದ್ಯೋಗವಕಾಶಗಳು ಇದ್ದು ವಿದ್ಯಾರ್ಥಿಗಳು ತಮ್ಮ ಬುದ್ಧಿವಂತಿಕೆಯನ್ನು ಪ್ರದರ್ಶಿಸಿ ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಬೇಕೆಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಈ ತರಬೇತಿ ಕಾರ್ಯಕ್ರಮದಿಂದ ಕಂಪನಿಗಳ ಸಂದರ್ಶನವನ್ನು ಹೇಗೆ ಎದುರಿಸಬೇಕು ಮತ್ತು ನಮ್ಮ ವರ್ತನೆ ಹಾಗೂ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವುದರ ಬಗ್ಗೆ ಹೇಗೆ ತರಬೇತಿ ಕಾರ್ಯಕ್ರಮವು ಸಹಕಾರಿಯಾಯಿತು ಎಂದು ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಸಮಾರಂಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಶ್ರೀ ವೈ ಯು ಸುಭಾಷ್ ಚಂದ್ರ, ಸಹ ಆಡಳಿತಾಧಿಕಾರಿ ಶ್ರೀ ಶಿವಕುಮಾರ್, ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಹಾಗೂ ವಿದ್ಯಾರ್ಥಿಗಳ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!