ಮನೆಗಳ್ಳನ ಬಂಧಿಸಿದ ಚನ್ನಗಿರಿ ಪೊಲೀಸ್: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ.

ದಾವಣಗೆರೆ: ಮನೆ ಕಳವು ಮಾಡುತ್ತಿದ್ದ ಆರೋಪಿತನನ್ನು ಬಂಧಿಸಿರುವ ಚನ್ನಗಿರಿ ಪೊಲೀಸರು ಬಂಧಿತನಿಂದ 2.10 ಲಕ್ಷ ಮೌಲ್ಯದ ಚಿನ್ನಾಭರಣಗಳು ಮತ್ತು 27 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಂಗಳೂರಿನ ಸ್ವಾಮಿ @ ನವೀನ್ (29) ಬಂಧಿತ ಆರೋಪಿ. ಈತ ಕಳೆದ ಏಪ್ರೀಲ್ ನಲ್ಲಿ ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿ ಗ್ರಾಮದ ಮನೆಯೊಂದರಲ್ಲಿ 10 ಸಾವಿರ ನಗದು ಮತ್ತು 65 ಗ್ರಾಂ ಬಂಗಾರದ ಆಭರಣಗಳನ್ನು ಕಳುವು ಮಾಡಿದ್ದ. ಈ ಬಗ್ಗೆ ದೂರು ದಾಖಲಾಗಿತ್ತು.
ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪತ್ತೆ ಕಾರ್ಯದಲ್ಲಿ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳಾದ ರುದ್ರೇಶ್, ಮಂಜುನಾಥ ಪ್ರಸಾದ್, ರುದ್ರೇಶ್, ಪರಶುರಾಮ ಜೆ, ರೇವಣಸಿದ್ದಪ್ಪ ಭಾಗವಹಿಸಿದ್ದರು.