ಆಂಧ್ರ ಬಿಜೆಪಿ ಪಾಲಿಗೂ ‘ಶುಭ ಶುಕ್ರವಾರ’; ಕಾಂಗ್ರೆಸ್ ತೊರೆದು ಕಮಲ ಧ್ವಜ ಹಿಡಿದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ

ದೆಹಲಿ: ಆಂಧ್ರ ಪ್ರದೇಶ ರಾಜಕಾರಣ ಭರ್ಜರಿ ವಿದ್ಯಮಾನಗಳಿಗೆ ಸಾಕ್ಷಿಯಾಗುತ್ತಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Former CM of Andhra Pradesh, Shri Kiran Kumar Reddy joins BJP at Party Headquarters in New Delhi. #JoinBJP https://t.co/3XhDcVIHB2
— BJP (@BJP4India) April 7, 2023
2014ರಲ್ಲಿ ಆಂಧ್ರಪ್ರದೇಶ ರಾಜ್ಯ ವಿಭಜನೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ಆಗಿನ ಸಿಎಂ ಕಿರಣ್ ಕುಮಾರ್ ರೆಡ್ಡಿ ಯುಪಿಎ ಸರ್ಕಾರದ ನಡೆ ವಿರೋಧಿಸಿ ಕಾಂಗ್ರೆಸ್ ಪಕ್ಷ ತೊರೆದಿದ್ದರು. ಬಳಿಕ ಅವರು, ‘ಜೈ ಸಮೈಕ್ಯಂಧ್ರ’ ಎಂಬ ಪಕ್ಷವನ್ನು ಸ್ಥಾಪಿಸಿದ್ದರು. ಕೆಲ ಸಮಯದಿಂದ ರಾಜಕೀಯದಿಂದ ದೂರ ಉಳಿದಿದ್ದ ಕಿರಣ್ ಕುಮಾರ್ 2018ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದರು. ಅದಾಗಿಯೂ ಕಾಂಗ್ರೆಸ್ ನಾಯಕರ ಬಗ್ಗೆ ಬೇಸರಗೊಂಡಿದ್ದ ಅವರು, ಇತ್ತೀಚಿಗಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು.
ಬೆಂಬಲಿಗರ ಸಲಹೆಯಂತೆ ಬಿಜೆಪಿ ಸೇರುವ ನಿರ್ಧಾರ ಕೈಗೊಂಡ ಕಿರಣ್ ಕುಮಾರ್ ರೆಡ್ಡಿ, ಶುಭ ಶುಕ್ರವಾರದಂದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಮಲ ಧ್ವಜ ಹಿಡಿದರು. ಸರಳ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು, ಕಿರಣ್ ಕುಮಾರ್ ರೆಡ್ಡಿ ಅವರಿಗೆ ಕೇಸರಿ ಶಾಲೂ ಹೊದಿಸುವ ಮೂಲಕ ಬಿಜೆಪಿಗೆ ಬರಮಾಡಿಕೊಂಡರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಹಿತ ಅನೇಕ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.