ಗ್ರಾಮೀಣಾಭೀವೃದ್ಧಿ ಇಲಾಖೆಯ ಸಿಬ್ಬಂದಿಗೆ ಶುಭ ಸುದ್ದಿ: ಮಹತ್ವರದ ಘೊಷಣೆ ಮಾಡಿದ ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಸೋಮವಾರ ಶಿವಮೊಗ್ಗದ ಜಿಲ್ಲಾ ಸಭಾಂಣದಲ್ಲಿ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೆ ಪರಿಸ್ಥಿತಿ ಅವಲೊಕಿಸಲು ಮತ್ತು ಸೊಂಕು ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ರಾಜ್ಯದ ಮೈಸೂರು ಮತ್ತು ಬೆಂಗಳೂರು ಕಂದಾಯ ವಿಭಾಗಗಳ ಒಟ್ಟು 3000 ಗ್ರಾಮ ಪಂಚಾಯತ್ಗಳ ಅಧ್ಯಕ್ಷರುಗಳ ಮತ್ತು ಪಿಡಿಓ ಹಾಗೂ ಇಓ ಮತ್ತು ಸಿ.ಇ.ಓ ಅಧಿಕಾರಿಗಳ ಜೊತೆ ನೇರವಾಗಿ ಸಂವಾದ ನಡೆಸಿ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಹಲವಾರು ಅಧಿಕಾರಿಗಳು ನಮ್ಮ ಇಲಾಖೆಯ ಸಿಬ್ಬಂದಿಗಳು ಕೋವಿಡ್ ಕಾರ್ಯ ನಿರ್ವಹಿಸುತ್ತಿರುವವರನ್ನು ಫ್ರಂಟ್ ಲೈನ್ ವಾರಿಯರ್ಸ್ ಪಟ್ಟಿಯಲ್ಲಿ ಸೇರಿಸುವ ಕುರಿತು ವಿಚಾರಿಸಿದರು.
ಈಗಾಗಲೇ ನಮ್ಮ ಇಲಾಖೆಯಿಂದ ಈ ಸಂಬಂಧ ಒಂದು ಆದೇಶ ಹೊರಡಿಸಲಾಗಿದೆ. ಇನ್ನೂ ಅದರ ಬಗ್ಗೆ ಗೊಂದಲ ಇದ್ದರೆ ಅದನ್ನು ಕೂಡ ಬಗೆಹರಿಸಲಾಗುವುದು ಮತ್ತು ಉಳಿದ ಇಲಾಖೆಗಳಲ್ಲಿ ನೀಡುವಂತಹ ಎಲ್ಲ ವಿಶೇಷ ಸೌಲಭ್ಯಗಳನ್ನು ನಮ್ಮ ಇಲಾಖೆಯಿಂದ ಕೈಗೊಳ್ಳಲು ಕ್ರಮಕೈಗೊಳ್ಳಲಾಗಿದೆ.
ಎಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.