ಜನಾರ್ಧನ ರೆಡ್ಡಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಗೂಳಿಹಟ್ಟಿ ಶೇಖರ್

ಚಿತ್ರದುರ್ಗ: ಹೊಸದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಶಾಸಕ ಗೂಳಿಹಟ್ಟಿ ಡಿ.ಶೇಖರ್, ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ. ಪಕ್ಷೇತರ ಅಥವಾ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯುವ ನಿರ್ಧಾರ ಪ್ರಕಟಿಸಿದ್ದಾರೆ.
ವಾಣಿವಿಲಾಸ ಜಲಾಶಯದ ಹಿನ್ನೀರಿನ ಹಾರನ ಕಣಿವೆ ರಂಗನಾಥಸ್ವಾಮಿ ದೇವಸ್ಥಾನದ ಬಳಿ ಬುಧವಾರ ಬೆಂಬಲಿಗರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ ಅವರು, ಕ್ಷೇತ್ರ ವ್ಯಾಪ್ತಿಯಲ್ಲಿ ಬೈಕ್ ಜಾಥಾ ನಡೆಸಿ ಚುನಾವಣಾ ಪ್ರಚಾರ ಆರಂಭಿಸಿದರು.