Valmiki Jayanti; ವಾಲ್ಮೀಕಿ ಜಯಂತಿಗೆ ಅನುದಾನ ಹೆಚ್ಚಳ; ಜಿಲ್ಲಾ, ತಾಲ್ಲೂಕಿಗೆ 1.5 ಲಕ್ಷ, 35 ಸಾವಿರ

ಬೆಂಗಳೂರು, ಅ.13: ಪ್ರಸಕ್ತ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ (Valmiki Jayanti) ಆಚರಣೆಯನ್ನು ಸರ್ಕಾರದ ವತಿಯಿಂದ ರಾಜ್ಯಾದ್ಯಂತ ಆಚರಿಸಲು ಜಿಲ್ಲಾ ಮಟ್ಟದ ಆಚರಣೆಗೆ 1 ಲಕ್ಷದಿಂದ 1.5 ಲಕ್ಷ ರೂ. ಹಾಗೂ ತಾಲ್ಲೂಕು ಮಟ್ಟದ ಆಚರಣೆಗೆ 25 ಸಾವಿರದಿಂದ 35 ಸಾವಿರ ರೂಪಾಯಿ ಅನುದಾನವನ್ನು ಪರಿಷ್ಕರಣೆ ಮಾಡಿ ಆದೇಶಿಸಲಾಗಿದೆ.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಬಿಡುಗಡೆ ಮಾಡಲು ಸರ್ಕಾರ ಮಂಜೂರಾತಿ ನೀಡಿದ್ದು, ಈ ವೆಚ್ಚವನ್ನು ಪರಿಶಿಷ್ಟ ಪಂಗಡದ ವಿವಿಧ ಅಭಿವೃದ್ಧಿ ಯೋಜನೆಯ ಲೆಕ್ಕ ಶೀರ್ಷಿಕೆ ಅಡಿಯಲ್ಲಿ ಒದಗಿಸಿರುವ ಅನುದಾನದಲ್ಲಿ ಭರಿಸಬೇಕು ಎಂದು ಸರ್ಕಾರದ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.

Hindu-muslim; ಮುಸ್ಲಿಂ ಗೆಳೆಯನ ಆರೋಗ್ಯಕ್ಕಾಗಿ ತುಲಾ ಭಾರ ಹರಕೆ ತೀರಿಸಿದ ಹಿಂದೂ ಸ್ನೇಹಿತ

2017-18ನೇ ಸಾಲಿನಲ್ಲಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಆಚರಿಸಲು ಪ್ರತಿ ಜಿಲ್ಲೆಗೆ 1 ಲಕ್ಷ ರೂ. ಹಾಗೂ ತಾಲ್ಲೂಕು ಮಟ್ಟಕ್ಕೆ 25 ಸಾವಿರ ರೂ. ಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿತ್ತು. ಹಾಗೆಯೇ ಈ ಭಾರೀ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳಿಗೆ ಕಾಲಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು.

ಈ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅನುದಾನವನ್ನು ಹೆಚ್ಚಿಸಲು ಕ್ರಮಕೈಗೊಂಡಿದ್ದು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!