ದಾವಣಗೆರೆಯಲ್ಲಿಯೇ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪಿಸುವುದು ಶತಃ ಸಿದ್ದ: ಸಂಸದ ಜಿಎಂ ಸಿದ್ದೇಶ್ವರ

IMG-20210710-WA0025

ದಾವಣಗೆರೆ: ನಗರದಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವುದು ಶತಃಸಿದ್ಧ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಸವಾಲು ಹಾಕಿದ್ದಾರೆ.

ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ತಾಯಿ ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೇಂಟರ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಸಚಿವ ಡಾ. ಸುಧಾಕರ್ ಅವರೊಂದಿಗೆ ಭೇಟಿ ನೀಡಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಈಗಾಗಲೇ ಭೂಮಿ ಗುರುತಿಸಿ, ನಕ್ಷೆ ಸಹಿತ ವರದಿ ಸಲ್ಲಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶೀಘ್ರವೇ ಅನುಮೋದನೆ ಪಡೆದು, ಆದಷ್ಟು ಬೇಗ ಶಂಕುಸ್ಥಾಪನೆ ನೆರವೇರಿಸುತ್ತೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!