ಏ.14 ರಂದು ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯಕ್ಕೆ ಸರ್ಕಾರ ಆದೇಶ: ಕರ್ನಾಟಕ ಭೀಮಸೇನೆ ಸಂಘಟನೆಯಿಂದ ಕೃತಜ್ಞತೆ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು (Ambedkar Jayanti 2024) ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳು ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. ಆದರೆ ಏಪ್ರಿಲ್ 14ರಂದು ‘ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ, ಎಸ್‍ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಿಭಾಗಿತ್ವದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತೆ ಎಲ್ಲಾ ಶಾಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಾಣಧೀಕರಿಗಳಿಗೆ, ಉಪ ನಿರ್ದೇಶಕರಿಗೆ ತಿಳಿಸಿದೆ. ಈ ಒಂದು ಆದೇಶವನ್ನು ಹೊರಡಿಸಿರುವ ರಾಜ್ಯ ಸರ್ಕಾರಕ್ಕೆ, ಮಾನ್ಯ ಮುಖ್ಯಮಂತ್ರಿಗಳಿಗೆ, ಶಿಕ್ಷಾಣಧೀಕರಿಗಳಿಗೆ ಕರ್ನಾಟಕ ಭೀಮಸೇನೆ ಸಂಘಟನೆಯಿಂದ ಕೃತಜ್ಞತೆ ಸಲ್ಲಿಸಲಾಗಿದೆ