ಕಡಬ: ಸರಕಾರಿ ಪದವಿ ಪೂರ್ವ ಕಾಲೇಜ್‌ ಕಡಬದ ಆ್ಯಸಿಡ್ ದಾಳಿ ಪ್ರಕರಣ:ಕೇರಳ ಮೂಲದ ಇಬ್ಬರು ಪೊಲೀಸ್‌ ವಶ

ಕಡಬ: ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರನ್ನು ಗುರಿಯಾಗಿಸಿ ಮಾ.4ರ ಬೆಳಿಗ್ಗೆ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯಾಗಿರುವ ಕೇರಳ ಮೂಲದ ಎಂ.ಬಿ.ಎ.ವಿದ್ಯಾರ್ಥಿ ಅಭಿನ್ನನ್ನು ಮಾ.5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಪೊಲೀಸರು ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ಆತನನ್ನು 10 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದರು.

ಇದೀಗ ಉಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಆರೋಪಿ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರು ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಕಡಬಕ್ಕೆ ಕರೆತರಲಾಗಿದ್ದು, ಪೊಲೀಸರ ವಶದಲ್ಲಿರುವ ಇಬ್ಬರು ಈ ಪ್ರಕರಣದಲ್ಲಿ ಏನು ಪಾತ್ರ ವಹಿಸಿದ್ದಾರೆ ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದು ಬರಬೇಕಿದೆ. ಆರೋಪಿ ಅಭಿನ್‌ಗೆ ಆ್ಯಸಿಡ್ ತಂದುಕೊಟ್ಟ ವ್ಯಕ್ತಿ ಹಾಗೂ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ವಸ್ತ್ರವನ್ನು ಹೊಲಿದುಕೊಟ್ಟ ವ್ಯಕ್ತಿ ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!