ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ: ಶಾಸಕ ಬಸವರಾಜು ವಿ ಶಿವಗಂಗಾ
ಚನ್ನಗಿರಿ :- ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ಸಿಗಬೇಕು, ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಶಿಕ್ಷಣದ ಅಭಿವೃದ್ಧಿಗೆ ಹೆಚ್ಚು ಮಹತ್ವ ನೀಡುತ್ತಿದೆ ಎಂದು ಶಾಸಕರಾದ ಬಸವರಾಜು ವಿ ಶಿವ ಗಂಗಾ ತಿಳಿಸಿದರು. ಸಂತೇಬೆನ್ನೂರು ಗ್ರಾಮದ ಮೌಲಾನ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಯಲ್ಲಿ ಅಲ್ಪ ಸಂಖ್ಯಾತರ ನಿರ್ದೇಶನಲಯ ಬೆಂಗಳೂರು, ಜಿಲ್ಲಾ ಪಂಚಾಯತ್ ದಾವಣಗೆರೆ .ಇವರ ಸಹಯೋಗದೊಂದಿಗೆ ನಡೆಸಲಾಗುತ್ತಿರುವ ಆಜಾದ್ ಶಾಲಾ ಶಿಕ್ಷಣೋತ್ಸವ 2024 ಹಾಗೂ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಈ ವಿಷಯ ತಿಳಿಸಿದರು. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಜೊತೆಗೆ, ಸಂಸ್ಕೃತಿ, ಸಂಸ್ಕಾರ ಬಗ್ಗೆಯೂ ತಿಳಿಸಿಕೊಡುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನೂ ಕಳಿಸಿಕೊಡಬೇಕೆಂದರು. ಶಾಲೆ ಒಂದು ದೇವಾಲಯವಿದ್ದಂತೆ ಮಕ್ಕಳಿಗೆ ವಿದ್ಯಾದಾನ ಮಾಡುವ ಒಂದು ಸ್ಥಳ ನಾವು ನೀವು ಅದನ್ನ ಕಾಪಾಡಿಕೊಂಡು ಹೋಗಬೇಕಿದೆ ಎಂದರು. ಈ ವೇಳೆ ಶಾಲಾ ಬೋಧಕ ವರ್ಗ, ಪೋಷಕರು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.