ಹೊರಗುತ್ತಿಗೆಯ ನೀರುಗಂಟಿ ಮತ್ತು ವಾಹನ ಚಾಲಕರ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು: ದುಗ್ಗೇಶ್

ದುಗ್ಗೇಶ್

ದಾವಣಗೆರೆ: ಪೌರಕಾರ್ಮಿಕರ ಮಾದರಿಯಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ನೀರುಸರಬರಾಜು ಸಹಾಯಕರುಗಳಿಗೆ ನೇರಪಾವತಿಗೆ ಆಗ್ರಹಿಸಿ ರಾಜ್ಯಮಟ್ಟದಲ್ಲಿ ನಡೆಯುತ್ತಿರುವ ಮುಷ್ಕರದಿಂದಾಗಿ ನಗರದಲ್ಲಿ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂದು ಜಿಲ್ಲಾ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ದುಗ್ಗೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಾಹನ ಚಾಲಕರು, ಯೂಜಿಡಿ ಕಾರ್ಮಿಕರು ಸಹ ಪೌರಕಾರ್ಮಿಕರಾಗಿದ್ದು ಇವರನ್ನು ಹಾಗೂ ನೀರುಸರಬರಾಜು ಸಹಾಯಕರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ತರಬೇಕಿದೆ.ಇದರಿಂದ ಹೊರಗುತ್ತಿಗೆ ನೌಕರರ ದಕ್ಷತೆಯೂ ಹೆಚ್ಚಲಿದೆ.ನಗರದ ಕಸ ವಿಲೇವಾರಿ ಹಾಗೂ ಕುಡಿಯುವ ನೀರಿನ ಸಮಸ್ಯೆಯು ಬಗೆಹರಿಯಲಿದೆ ಎಂದು ಅವರು ಒತ್ತಾಯಿಸಿದ್ದಾರೆ‌.
ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹೊರಗುತ್ತಿಗೆ ನೌಕರರ ಹೋರಾಟ ನಡೆಯುತ್ತಿದ್ದು ರಾಜ್ಯ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಸರಕಾರ ಕೂಡಲೆ ಮಧ್ಯಪ್ರವೇಶಿಸಿ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಇತ್ಯರ್ಥಪಡಿಸಬೇಕು. ಈಗಾಗಲೇ ಬೇಸಿಗೆ ಆರಂಭವಾಗಿದ್ದು ಕುಡಿಯುವ ನೀರಿನ ಸಮಸ್ಯೆ ಕಸ ವಿಲೇವಾರಿ ಬಿಗಡಾಯಿಸಲಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನಾ ರಾಜ್ಯ ಸರಕಾರ ಎಚ್ಚೆತ್ತುಕೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!