ಗೋ ಪೂಜೆಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಏಕೆ ರೂಪಿಸಿದೆ ಎಂದು ತಿಳಿದಿಲ್ಲ – ಶಾಸಕ ಡಾ|| ಶಾಮನೂರು ಶಿವಶಂಕರಪ್ಪ

ದಾವಣಗೆರೆ: ದಕ್ಷಿಣ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಗೋಪೂಜೆ ಸಮಾರಂಭದಲ್ಲಿ ಭಾಗವಹಿಸಿ ಗೋವುಗಳಿಗೆ ಪೂಜೆ ಸಲ್ಲಿಸಿದರು.
ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ಭಾರತ ದೇಶ ಕೃಷಿಕರ ನಾಡು, ಈ ದೇಶದಲ್ಲಿ ಬಲಿಪಾಡ್ಯಮಿ ಸಹಿತ ಬಹುತೇಕ ಹಬ್ಬ-ಹರಿದಿನಗಳಂದು ಗೋವುಗಳಿಗೆ ಪೂಜೆ ಸಲ್ಲಿಸುತ್ತಾ ಬರಲಾಗಿದೆ. ನಾವು ಸಹ ಇಂದಿಗೂ ಗೋವುಗಳಿಗೆ ಪೂಜೆ ಸಲ್ಲಿಸುತ್ತಿದ್ದು, ಸರ್ಕಾರ ಇದೊಂದು ಸರ್ಕಾರಿ ಕಾರ್ಯಕ್ರಮವಾಗಿ ಏಕೆ ರೂಪಿಸಿದೆ ಎಂದು ತಿಳಿದಿಲ್ಲ ಎಂದರು.
ನಾವುಗಳು ನಮ್ಮ ಸಂಪ್ರದಾಯದಂತೆ ಪೂಜೆ ಸಲ್ಲಿಸುತ್ತಾ ಬಂದಿದ್ದೇವೆ. ಬಹಳಷ್ಟು ಜನರು ಸಹ ಈ ಸಂಪ್ರದಾಯವನ್ನು ಪರಿಪಾಲನೆ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಮತ್ತೇಕೆ ಇದನ್ನು ಸರ್ಕಾರಿ ಕಾರ್ಯಕ್ರಮವಾಗಿ ಘೋಷಿಸಿತು ಎಂಬುದನ್ನು ತಿಳಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಕಂದಾಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.